HomeKarnatakaಉದ್ಯೋಗಾಂಕ್ಷಿಗಳ ಗಮನಕ್ಕೆ : ಸೆ.15 ರಂದು ಶಿವಮೊಗ್ಗದಲ್ಲಿ 'ಉದ್ಯೋಗ ಮೇಳ' ಆಯೋಜನೆ |JOB FAIR

ಉದ್ಯೋಗಾಂಕ್ಷಿಗಳ ಗಮನಕ್ಕೆ : ಸೆ.15 ರಂದು ಶಿವಮೊಗ್ಗದಲ್ಲಿ ‘ಉದ್ಯೋಗ ಮೇಳ’ ಆಯೋಜನೆ |JOB FAIR

ಶಿವಮೊಗ್ಗ : ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಶಿವಮೊಗ್ಗ ಜಿಲ್ಲಾಡಳಿತ ವತಿಯಿಂದ ಸೆ. 15 ರಂದು ಶಿವಮೊಗ್ಗದ ಬಿ.ಹೆಚ್.ರಸ್ತೆ, ಸರ್ಕಾರಿ ಪದವಿ ಪೂರ್ವ ಸೈನ್ಸ್ ಫೀಲ್ಡ್ನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಐಟಿಐ, ಡಿಪ್ಲೋಮಾ , ಬಿಕಾಂ, ಬಿ,ವೋಕ್, ಬಿಎ, ಬಿಸಿಎ, ಬಿಇ, ಬಿಸಿಎ, ಬಿಇ, ಬಿಟೆಕ್ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಗಾಜನೂರು, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂ. ಸಂ.: 8747824088 ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆನಂದಗಿರಿ, ತೀರ್ಥಹಳ್ಳಿ, ಭದ್ರಾವತಿ ದೂ.ಸಂ.: 9880005425 ಗಳನ್ನು ಸಂಪರ್ಕಿಸುವಂತೆ ತೀರ್ಥಹಳ್ಳಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular