ಸಾರ್ವಜನಿಕರ ಗಮನಕ್ಕೆ : ಸೆ.30 ರ ರಾತ್ರಿ 8 ರವರೆಗೆ ಉಪನೋಂದಣಾಧಿಕಾರಿಗಳ ಕಚೇರಿ ಕಾರ್ಯನಿರ್ವಹಣೆ

ಬೆಂಗಳೂರು : ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ ( Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ.

ಮುಂದಿನ ದಿನಗಳಲ್ಲಿ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳು ಇರುತ್ತವೆ,  ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಗಳ ಕೆಲಸದ ಅವಧಿಯನ್ನು ಸೆ.23  ರಿಂದ ಜಾರಿಗೆ ಬರುವಂತೆ ಬೆಳಿಗ್ಗೆ 8  ಗಂಟೆಯಿಂದ ರಾತ್ರಿ 8  ಗಂಟೆವರೆಗೆ ಕಾರ್ಯ ನಿರ್ವಹಿಸಲು ಕಛೇರಿ ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ.

ಸೆಪ್ಟೆಂಬರ್ 23  ನಾಲ್ಕನೇ ಶನಿವಾರವದಂದೂ  ಕೂಡ ಈ ಅವಧಿಯಲ್ಲಿ ಕಾರ್ಯ ನಿರ್ವಹಿಸಲಾಗುವುದು. ಈ ಕೆಲಸದ ಅವಧಿಯು ಸೆ.30 ರವರೆಗೆ ಮಾತ್ರ ಜಾರಿಯಲ್ಲಿರುತ್ತದೆ.ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದು ಕೊಳ್ಳಬಹುದು ಎಂದು ತಿಳಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read