ರಾಜ್ಯದ SC-ST ಸಮುದಾಯವರ ಗಮನಕ್ಕೆ : ʻಗಂಗಾ ಕಲ್ಯಾಣʼ, ʻಭೂಒಡೆತನʼ ಯೋಜನೆಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ಬೆಂಗಳೂರು :  ಪರಿಶಿಷ್ಠ ಜಾತಿ ಹಾಗೂ ಪಂಗಡದವರು ಸ್ವಾವಲಂಬನೆಯ ಜೀವನ ರೂಪಿಸಿಕೊಳ್ಳುವಂತಾಗಲು ಸಮಾಜ ಕಲ್ಯಾಣ ಇಲಾಖೆ ಅಡಿಯ ವಿವಿಧ ನಿಗಮಗಳಿಂದ ಗಂಗಾ ಕಲ್ಯಾಣ, ಭೂ ಒಡೆತನ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ನವೆಂಬರ್ 29ರ ಇಂದು ಕೊನೆಯ ದಿನವಾಗಿದೆ.

ಆಸಕ್ತರು ನಿಮ್ಮ ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್, ಬಾಪೂಜಿ ಸೇವಾ ಕೇಂದ್ರ ಹಾಗೂ ಅಟಲ್ ಜನಸ್ನೇಹಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.

ಗಂಗಾ ಕಲ್ಯಾಣ ಯೋಜನೆ

ರೈತರ ಜಮೀನಿನಲ್ಲಿ ಅಗತ್ಯ ಇರುವ ಬೋರ್ವೆಲ್ ಕೊರೆಸಿ ಪಂಪ್ ಸೆಟ್ ಅಳವಡಿಸಿಕೊಳ್ಳಲು ಸರ್ಕಾರ ಉಚಿತ ಸೌಲಭ್ಯ ಕಲ್ಪಿಸಿ ಕೊಡುತ್ತಿದೆ ಇದರ ಜೊತೆಗೆ ಈ ಯೋಜನೆಯಡಿಯಲ್ಲಿ 1.5 ಲಕ್ಷ ರೂಪಾಯಿ ಗಳಿಂದ 3.50 ಲಕ್ಷ ರೂಪಾಯಿಗಳ ವರೆಗೆ ರೈತರು ಸರ್ಕಾರದಿಂದ ಸಹಾಯಧನ ಪಡೆಯಬಹುದು.

ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಮೂಲಕ ಅವರ ಸ್ವಾವಲಂಬಿ ಜೀವನವನ್ನು ಸಾಕಾರಗೊಳಿಸಲು ‘ಗಂಗಾ ಕಲ್ಯಾಣ ಯೋಜನೆ’ಯಡಿ, ಸಮಾಜ ಕಲ್ಯಾಣ ಇಲಾಖೆಯಡಿಯ ವಿವಿಧ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹರು ಇದೇ ನವೆಂಬರ್ 29ರ ಒಳಗಾಗಿ ನಿಮ್ಮ ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್, ಅಟಲ್ ಜನಸ್ನೇಹಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಅರ್ಜಿಸಲ್ಲಿಸಲುಬೇಕಾದದಾಖಲೆಗಳು :

→ ಪರಿಶಿಷ್ಟಜಾತಿ/ಪಂಗಡದವರಾಗಿದ್ದು, ಜಾತಿ ಪ್ರಮಾಣಪತ್ರ ಹೊಂದಿರಬೇಕು.

→ ಆದಾಯ ಮಿತಿ ಗ್ರಾಮೀಣ ಪ್ರದೇಶದಲ್ಲಿ ರೂ1.5 ಲಕ್ಷ, ನಗರ ಪ್ರದೇಶದಲ್ಲಿ ರೂ.2.00 ಲಕ್ಷ

→ ಕನಿಷ್ಠ 21 ವರ್ಷ ವಯೋಮಾನ

→ ಸಣ್ಣಹಿಡುವಳಿದಾರರ ಪ್ರಮಾಣಪತ್ರ ಹಾಗೂ ಇತ್ತೀಚಿನ ಪಹಣಿ ಆದಾಯ ಪ್ರಮಾಣ ಪತ್ರ, ಕುಟು೦ಬದ ಪಡಿತರ ಚೀಟಿ, ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್

ಆಸಕ್ತ ಅರ್ಹರು ನವೆಂಬರ್ 29ರ ಒಳಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಕಲ್ಯಾಣ ಮಿತ್ರ 24×7 ಸಹಾಯವಾಣಿ 9482300400 ಅಥವಾ X ಖಾತೆ @SWDGok

 ಭೂಒಡೆತನ ಯೋಜನೆ

ಸಮಾಜ ಕಲ್ಯಾಣ ಇಲಾಖೆಯಡಿ ವಿವಿಧ ನಿಗಮಗಳಿಂದ ಭೂ ಒಡೆತನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಸಮುದಾಯದ ಅರ್ಹರು ನವೆಂಬರ್ 29 ರೊಳಗೆ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ಹೊರಡಿಸಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು :

ಪರಿಶಿಷ್ಟ ಜಾತಿ/ಪಂಗಡದವರಾಗಿದ್ದು, ಜಾತಿ ಪ್ರಮಾಣಪತ್ರ ಹೊಂದಿರಬೇಕು

ಭೂ-ರಹಿತ ಮಹಿಳಾ ಕೃಷಿ ಕಾರ್ಮಿಕ ಪ್ರಮಾಣಪತ್ರ ಹೊಂದಿರಬೇಕು

ಆದಾಯ ಮಿತಿ : ಗ್ರಾಮೀಣ ಪ್ರದೇಶದಲ್ಲಿ ರೂ.1.5 ಲಕ್ಷ ನಗರ ಪ್ರದೇಶದಲ್ಲಿ ರೂ.2.00 ಲಕ್ಷ

ವಯೋಮಿತಿ ಕನಿಷ್ಠ 21 ಹಾಗೂ ಗರಿಷ್ಠ 50 ವರ್ಷ

ಆದಾಯ ಪ್ರಮಾಣ ಪತ್ರ, ಕುಟುಂಬದ ಪಡಿತರ ಚೀಟಿ, ಬ್ಯಾಂಕ್ ಪಾಸ್ ಬುಕ್. ಆಧಾರ್ ಕಾರ್ಡ್

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಕಲ್ಯಾಣ ಮಿತ್ತ 24×7 ಸಹಾಯವಾಣಿ 9482300400 com Xand @SWDGok swd.gokಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read