HomeAgricultureತಂಬಾಕು ಬೆಳೆಗಾರರ ಸಮಸ್ಯೆ: ದೆಹಲಿಯಲ್ಲಿ ದೇವೇಗೌಡರ ಮಹತ್ವದ ಸಭೆ

ತಂಬಾಕು ಬೆಳೆಗಾರರ ಸಮಸ್ಯೆ: ದೆಹಲಿಯಲ್ಲಿ ದೇವೇಗೌಡರ ಮಹತ್ವದ ಸಭೆ

ಕರ್ನಾಟಕದ ತಂಬಾಕು ಬೆಳೆಗಾರರ ಸಮಸ್ಯೆ ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮಹತ್ವದ ಸಭೆ ನಡೆಸಿದ್ದಾರೆ. ದೆಹಲಿಯಲ್ಲಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಘೋಯಲ್ ಅವರನ್ನು ಭೇಟಿ ಮಾಡಿ ತಂಬಾಕು ಬೆಳೆಗಾರರ ಸಮಸ್ಯೆಗಳ ಕುರಿತು ಸವಿಸ್ತಾರವಾಗಿ ವಿವರಿಸಿ, ಚರ್ಚಿಸಿದರು.

ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಕೊಡಗು-ಮೈಸೂರು ಕ್ಷೇತ್ರದ ಸಂಸದ ಯದುವೀರ್ ಒಡೆಯರ್, ಕೋಲಾರ ಸಂಸದ ಮಲ್ಲೇಶ್‌ ಬಾಬು, ಹುಣಸೂರು ಶಾಸಕ ಜಿ.ಡಿ.ಹರೀಶ್, ಶಾಸಕ ಎ.ಮಂಜು ಮುಂತಾದವರು ಉಪಸ್ಥಿತರಿದ್ದರು.

ತಂಬಾಕು ಬೆಳೆಗಾರರು ಸೂಕ್ತ ಬೆಲೆ ಸಿಗದೆ ಎದುರಿಸುತ್ತಿರುವ ಸಂಕಷ್ಟದ ಕುರಿತು ಹೆಚ್.ಡಿ.ದೇವೇಗೌಡರು ಸಭೆಯಲ್ಲಿ ವಿಷಯವನ್ನು ಪ್ರಸ್ತಾಪಿಸಿದರು. ತಂಬಾಕು ಬೆಳೆಗಾರರಿಗೆ ಮಾರುಕಟ್ಟೆಯಲ್ಲಿ ಸಮರ್ಪಕ ಬೆಲೆ ದೊರೆಯದೆ ರೈತರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ವಿಷಯವನ್ನು ಸಚಿವರ ಗಮನಕ್ಕೆ ತಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳೆಗಾರರು ಹಾಕಿರುವ ವೆಚ್ಚಕ್ಕೂ ತಕ್ಕ ಪ್ರತಿಫಲ ಸಿಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರ ಪರಿಣಾಮವಾಗಿ ಅನೇಕ ರೈತ ಕುಟುಂಬಗಳು ಸಂಕಷ್ಟ ಅನುಭವಿಸುತ್ತಿರುವ ಕುರಿತು ವಿವರಿಸಿದರು.

ತಂಬಾಕು ಬೆಳೆಗಾರರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರವು ಸೂಕ್ತ ಕ್ರಮ ಕೈಗೊಳ್ಳಬೇಕು, ರೈತರಿಗೆ ನ್ಯಾಯಯುತ ಬೆಲೆ ದೊರೆಯುವಂತೆ ನೋಡಿಕೊಳ್ಳಬೇಕು ಹಾಗೂ ಸಂಕಷ್ಟದಲ್ಲಿರುವ ರೈತರಿಗೆ ಅಗತ್ಯ ನೆರವು ಒದಗಿಸಬೇಕು ಎಂದು ಸಚಿವರಿಗೆ ಮನವಿ ಸಲ್ಲಿಸಿದರು.

ಸಚಿವ ಪಿಯೂಷ್ ಘೋಯಲ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿ, ತಂಬಾಕು ಬೆಳೆಗಾರರ ಸಮಸ್ಯೆ ಪರಿಹಾರಕ್ಕಾಗಿ ಶೀಘ್ರದಲ್ಲೇ ಕೇಂದ್ರ ಸರ್ಕಾರದಿಂದ ಸೂಕ್ತ ಕ್ರಮ ಕೈಗೊಂಡು ರೈತರ ನೆರವಿಗೆ ಧಾವಿಸುವ ಭರವಸೆ ನೀಡಿದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular