ಇಂದು ಸಿ.ಟಿ. ರವಿ, ಯತೀಂದ್ರ, ಬಲ್ಕೀಷ್ ಬಾನು ಸೇರಿ 17 ಎಂಎಲ್ಸಿಗಳ ಪ್ರಮಾಣ

ಬೆಂಗಳೂರು: ವಿಧಾನಸಭೆ, ಶಿಕ್ಷಕರ ಕ್ಷೇತ್ರ ಮತ್ತು ಪದವೀಧರ ಕ್ಷೇತ್ರಗಳಿಂದ ರಾಜ್ಯ ವಿಧಾನಪರಿಷತ್ ಗೆ ನೂತನವಾಗಿ ಆಯ್ಕೆಯಾಗಿರುವ 17 ಶಾಸಕರು ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯುವ ಸಮಾರಂಭದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನ ಪರಿಷತ್ ನ ನೂತನ ಸದಸ್ಯರಿಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.

ವಿಧಾನಸಭೆಯಿಂದ ವಿಧಾನಪರಿಷತ್ ಗೆ 11 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನ ಬೋಸರಾಜು, ಯತೀಂದ್ರ ಸಿದ್ದರಾಮಯ್ಯ, ಕೆ. ಗೋವಿಂದರಾಜುಮ ವಸಂತಕುಮಾ, ಜಗದೇವ ಗುತ್ತೇದಾರ, ಬಿಜೆಪಿಯ ಸಿ.ಟಿ. ರವಿ, ಎನ್. ರವಿಕುಮಾರ್, ಜೆಡಿಎಸ್ ನ ಜವರಾಯಿ ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪರಿಷತ್ ಮೂರು ಶಿಕ್ಷಕರ ಮತ್ತು ಮೂರು ಪದವೀಧರ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ನ ಕೆ.ಬಿ. ವಿವೇಕಾನಂದ, ಎಸ್.ಎಲ್. ಭೋಜೇಗೌಡ, ಕಾಂಗ್ರೆಸ್ ಟಿ.ಡಿ. ಶ್ರೀನಿವಾಸ್, ಬಿಜೆಪಿಯ ಡಾ. ಧನಂಜಯ ಸರ್ಜಿ, ಕಾಂಗ್ರೆಸ್ ನ ಚಂದ್ರಶೇಖರ ಪಾಟೀಲ್, ರಾಮೋಜಿ ಗೌಡ ಆಯ್ಕೆಯಾಗಿದ್ದಾರೆ. ಇವರೆಲ್ಲರೂ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read