ಬೆಂಗಳೂರು: ಮೈಸೂರಿನಲ್ಲಿ ಹೃದಯಾಘಾತದಿಂದ ನಿಧನರಾದ ಮಾಜಿ ಶಾಸಕ ಆರ್.ವಿ. ದೇವರಾಜ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಬೆಂಗಳೂರಿನ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ಕೆಆರ್ ಮಾರ್ಕೆಟ್ ಬಳಿ ಇರುವ ದೇವರಾಜ್ ಅವರ ಮನೆಯಲ್ಲಿ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 10 ಗಂಟೆಯ ನಂತರ ಜೆಸಿ ರಸ್ತೆಯಲ್ಲಿರುವ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಕನಕಪುರದ ಸೋಮನಹಳ್ಳಿ ತೋಟದ ಮನೆಯ ಬಳಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು.
ಬೆಂಗಳೂರಿನ ಚಾಮರಾಜಪೇಟೆ ಮತ್ತು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ನಾಯಕ ಆರ್.ವಿ. ದೇವರಾಜ್ ಸೋಮವಾರ ಕುಟುಂಬ ಸದಸ್ಯರೊಂದಿಗೆ ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಆಗಮಿಸಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಡಿಸೆಂಬರ್ 3ರಂದು ದೇವರಾಜ್ ಅವರ 68ನೇ ಹುಟ್ಟುಹಬ್ಬ ಇತ್ತು. ನಾಳೆಯೇ ಅಂತ್ಯಕ್ರಿಯೆ ನಡೆಯಲಿದೆ.
