HomeLatest Newsಇಂದು ಬೆಂಗಳೂರಿನಲ್ಲಿ ಮಾಜಿ ಶಾಸಕ ಆರ್.ವಿ. ದೇವರಾಜ್ ಅಂತಿಮ ದರ್ಶನಕ್ಕೆ ವ್ಯವಸ್ಥೆ: ನಾಳೆ ಹುಟ್ಟುಹಬ್ಬದ ದಿನವೇ...

ಇಂದು ಬೆಂಗಳೂರಿನಲ್ಲಿ ಮಾಜಿ ಶಾಸಕ ಆರ್.ವಿ. ದೇವರಾಜ್ ಅಂತಿಮ ದರ್ಶನಕ್ಕೆ ವ್ಯವಸ್ಥೆ: ನಾಳೆ ಹುಟ್ಟುಹಬ್ಬದ ದಿನವೇ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ

ಬೆಂಗಳೂರು: ಮೈಸೂರಿನಲ್ಲಿ ಹೃದಯಾಘಾತದಿಂದ ನಿಧನರಾದ ಮಾಜಿ ಶಾಸಕ ಆರ್.ವಿ. ದೇವರಾಜ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರಿನ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ಕೆಆರ್ ಮಾರ್ಕೆಟ್ ಬಳಿ ಇರುವ ದೇವರಾಜ್ ಅವರ ಮನೆಯಲ್ಲಿ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 10 ಗಂಟೆಯ ನಂತರ ಜೆಸಿ ರಸ್ತೆಯಲ್ಲಿರುವ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಕನಕಪುರದ ಸೋಮನಹಳ್ಳಿ ತೋಟದ ಮನೆಯ ಬಳಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು.

ಬೆಂಗಳೂರಿನ ಚಾಮರಾಜಪೇಟೆ ಮತ್ತು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ನಾಯಕ ಆರ್.ವಿ. ದೇವರಾಜ್ ಸೋಮವಾರ ಕುಟುಂಬ ಸದಸ್ಯರೊಂದಿಗೆ ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಆಗಮಿಸಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಡಿಸೆಂಬರ್ 3ರಂದು ದೇವರಾಜ್ ಅವರ 68ನೇ ಹುಟ್ಟುಹಬ್ಬ ಇತ್ತು. ನಾಳೆಯೇ ಅಂತ್ಯಕ್ರಿಯೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular