ಇಂದು ವರನಟ ಡಾ.ರಾಜ್’ಕುಮಾರ್ ಜನ್ಮದಿನಾಚರಣೆ : ಡಾ.ರಾಜ್ ಪುತ್ಥಳಿಗೆ ಗಣ್ಯರಿಂದ ಪುಷ್ಪನಮನ

ಬಳ್ಳಾರಿ : ಡಾ.ರಾಜ್ಕುಮಾರ್ ಜನ್ಮದಿನಾಚರಣೆಯ ಅಂಗವಾಗಿ ಗುರುವಾರ ಡಾ.ರಾಜ್ಕುಮಾರ್ ಉದ್ಯಾನವನದಲ್ಲಿನ ಡಾ.ರಾಜ್ ಕುಮಾರ್ ಅವರ ಪುತ್ಥಳಿಗೆ ಅಧಿಕಾರಿ ವೃಂದದವರು, ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಮಾತನಾಡಿ, ಕನ್ನಡ ನಾಡು-ನುಡಿ, ಭಾಷಾಭಿಮಾನ ರಾಷ್ಟç ಮಟ್ಟದಲ್ಲಿ ಬೆಳೆಸಲು ತಮ್ಮದೇ ಆದ ನಟನ ಶೈಲಿಯಲ್ಲಿ ಬೆಳ್ಳಿ ಪರದೆ ಮೇಲೆ ಒಲವು ಮೂಡಿಸಿದ ವರನಟ ಡಾ.ರಾಜ್ ಕುಮಾರ್ ಅವರ ಕೊಡುಗೆ ಅಪಾರ ಎಂದು ಹೇಳಿದರು.

ಡಾ.ರಾಜ್ ಕುಮಾರ್ ಅವರ ಎಲ್ಲಾ ಸಿನಿ ಚಿತ್ರಗಳು ಜೀವನದ ಎಲ್ಲಾ ಆಯಾಮಗಳನ್ನು ಪ್ರಸ್ತುತಪಡಿಸುತ್ತಿದ್ದವು. ಬಾಲ್ಯದಲ್ಲಿ ನಾವೆಲ್ಲರೂ ಅವರ ಚಿತ್ರಗಳನ್ನೇ ನೋಡಿಕೊಂಡು ಬೆಳೆದಿದ್ದೇವೆ ಎಂದು ತಿಳಿಸಿದ ಅವರು, ಇದೇ ಸಂದರ್ಭದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನದ ಶುಭಾಶಯ ತಿಳಿಸಿದರು.

ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ಸಿರಿಗೇರಿ ಪನ್ನರಾಜ್ ಅವರು ಮಾತನಾಡಿ, ಡಾ.ರಾಜ್ ಕುಮಾರ್ ಅವರ ಜನ್ಮದಿನಾಚರಣೆಯನ್ನು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಚರಿಸುವಂತೆ ಆದೇಶಿಸಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ತಿಳಿಸಿದರು.

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಪಿ.ಪ್ರಮೋದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕ ವಿ.ಸಿ.ಗುರುರಾಜ, ಕರ್ನಾಟಕ ಯುವ ಸಂಘದ ಅಧ್ಯಕ್ಷ ಬಿ.ಬಸವರಾಜ, ಕರ್ನಾಟಕ ಜನಸೈನ್ಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಕೆ.ಎರ್ರಿಸ್ವಾಮಿ, ಸ್ವಾಮಿ ವಿವೇಕಾನಂದ ಯುವಕ ಸಂಘದ ಅಧ್ಯಕ್ಷ ಪಿ.ಗಾದೆಪ್ಪ, ಮುಖಂಡರಾದ ಚಂದ್ರಶೇಖರ್ ಅಚಾರ್, ರಸೂಲ್ ಸಾಬ್ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು, ಡಾ.ರಾಜ್ ಕುಮಾರ್ ಅಭಿಮಾನಿಗಳು, ಸಾರ್ವಜನಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಇಂದು ಸಂಜೆ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಡಾ.ರಾಜ್ಕುಮಾರ್ ಜನ್ಮದಿನಾಚರಣೆಯ ಅಂಗವಾಗಿ ಇಂದು (ಏ.24 ರಂದು) ಸಂಜೆ 5.30 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ.

ಡಾ.ರಾಜ್ಕುಮಾರ್ ಜನ್ಮದಿನಾಚರಣೆಯ ಕಾರ್ಯಕ್ರಮ ಕುರಿತು ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಬಳ್ಳಾರಿಯ ಮಸ್ತಾನ್ ಸೌಂಡ್ಸ್ ನ ಪ್ರತಿಭಾ ಆರ್ಕೆಷ್ಟ್ರಾ ವತಿಯಿಂದ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಡಾ.ರಾಜ್ ಕುಮಾರ್ ಅವರ ಅಭಿಮಾನಿಗಳು, ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ರಾಜಕೀಯ ಮುಖಂಡರು, ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ತಪ್ಪದೇ ಹಾಜರಾಗುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಪ್ರಕಟಣೆ ಹೊರಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read