HomeKarnatakaಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ : ಉಚಿತ ಲ್ಯಾಪ್ ಟಾಪ್ ಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ...

ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ : ಉಚಿತ ಲ್ಯಾಪ್ ಟಾಪ್ ಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ಬೆಂಗಳೂರು :ಕಾರ್ಮಿಕ ಇಲಾಖೆಯಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ನೋಂದಾಯಿತ ಫಲಾನುಭವಿಗಳ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣೆ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 22ರ ಇಂದು ಕೊನೆಯ ದಿನವಾಗಿದೆ.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಪೈಕಿ 2023-2024ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ನೀಡಲಾಗುತ್ತಿದೆ. ನೋಂದಣಿಯಾಗಿರುವ ಕಾರ್ಮಿಕರ ಮಕ್ಕಳು ಈ ಸೌಲಭ್ಯವನ್ನು ಪಡೆಯಲು ಇಚ್ಛಿಸಿದ್ದಲ್ಲಿ, ಅರ್ಜಿ ನಮೂನೆಯನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬುಹುದಾಗಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಸೆ.19 ಅಂತಿಮ ದಿನವಾಗಿದ್ದು, ಆದರೆ ಎರಡು ದಿನ ರಜೆಗಳು ಬಂದಿರುವ ಮೇರೆಗೆ ಸೆ. 22ರ ಸಾಯಂಕಾಲ 5:30ರ ವರೆಗೆ ಅರ್ಜಿ ಸಲ್ಲಿಕೆಗಾಗಿ ಅವಕಾಶ ಕಲ್ಪಿಸಲಾಗಿದೆ. ತದನಂತರ ಬರುವ ಯಾವುದೇ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸುವುದಿಲ್ಲ. ಇದೇ ಅಂತಿಮ ದಿನಾಂಕವೆಂದು ಪರಿಗಣಿಸಬೇಕು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular