HomeLive Newsಇಂದು ಭಾರತ ಹಾಗೂ ಶ್ರೀಲಂಕಾ ನಡುವಣ ಎರಡನೇ ಟಿ ಟ್ವೆಂಟಿ ಪಂದ್ಯ

ಇಂದು ಭಾರತ ಹಾಗೂ ಶ್ರೀಲಂಕಾ ನಡುವಣ ಎರಡನೇ ಟಿ ಟ್ವೆಂಟಿ ಪಂದ್ಯ

ನಿನ್ನೆ ನಡೆದ ಭಾರತ ಹಾಗೂ ಶ್ರೀಲಂಕಾ ನಡುಮಣ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ಭಾರತ ತಂಡ 43 ರನ್ ಗಳಿಂದ ಭರ್ಜರಿ ಜಯ ಸಾಧಿಸುವ ಮೂಲಕ ಶುಭಾರಂಭ ಮಾಡಿದೆ.  48 ಎಸೆತಗಳಲ್ಲಿ 79 ರನ್  ಬಾರಿಸಿದ್ದ ಶ್ರೀಲಂಕಾದ ಆರಂಭಿಕ ಆಟಗಾರ ಪಾತುಂ ನಿಸ್ಸಾಂಕ ಔಟ್ ಆದ ಬಳಿಕ ಉಳಿದ ಬ್ಯಾಟ್ಸ್ಮನ್ ಗಳು ಬ್ಯಾಕ್ ಟು ಬ್ಯಾಕ್ ತಮ್ಮ ವಿಕೆಟ್  ಒಪ್ಪಿಸಿದ್ದಾರೆ. ಈ ಮೂಲಕ ಶ್ರೀಲಂಕಾ ತಂಡಕ್ಕೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.

ಇಂದು ಎರಡನೇ ಟಿ ಟ್ವೆಂಟಿ ಪಂದ್ಯ ನಡೆಯಲಿದ್ದು, ಭಾರತ ತಂಡ ಸರಣಿ ತನ್ನದಾಗಿಸಿಕೊಳ್ಳುವ ನಿರೀಕ್ಷೆಯಲ್ಲಿದೆ,  ಶ್ರೀಲಂಕಾ ತಂಡಕ್ಕೆ  ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಒಟ್ಟಾರೆ ಮತ್ತೊಂದು ರೋಮಾಂಚನಕಾರಿ ಪಂದ್ಯಕ್ಕೆ ಪಲ್ಲೆಕೆಲೆ ಕ್ರೀಡಾಂಗಣ ಸಜ್ಜಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular