HomeEntertainmentಚಾಂಪಿಯನ್ ಸಿನಿಮಾ ಬಿಡುಗಡೆಯಾಗಿ ಇಂದಿಗೆ ಒಂದು ವರ್ಷ

ಚಾಂಪಿಯನ್ ಸಿನಿಮಾ ಬಿಡುಗಡೆಯಾಗಿ ಇಂದಿಗೆ ಒಂದು ವರ್ಷ

ಶಾಹುರಾಜ ಶಿಂದೆ ನಿರ್ದೇಶನದ ಸಚಿನ್ ಧನ್ಪಾಲ್ ಅಭಿನಯದ ಬ್ಲಾಕ್ ಬಸ್ಟರ್ ಸಿನಿಮಾ ‘ಚಾಂಪಿಯನ್’ ಕಳೆದ ವರ್ಷ ಅಕ್ಟೋಬರ್ 14ರಂದು ತೆರೆಕಂಡಿತ್ತು. ಇಂದಿಗೆ ಒಂದು ವರ್ಷಗಳಾಗಿದ್ದು, ನಟ ಸಚಿನ್ ಧನ್ಪಾಲ್ ಈ ಸಂತಸವನ್ನು ತಮ್ಮ instagram ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಪ್ರೇಕ್ಷಕರಿಗೆ ಧನ್ಯವಾದ ತಿಳಿಸಿದ್ದಾರೆ.

ಶಿವಂ ಪ್ರೊಡಕ್ಷನ್ ಬ್ಯಾನರ್ ನಡಿ ನಿರ್ಮಾಣ ಮಾಡಿದ್ದ ಈ ಚಿತ್ರದಲ್ಲಿ ಸಚಿನ್ ದನ್ಪಾಲ್ ಜೊತೆ ಅದಿತಿ ಪ್ರಭುದೇವ ನಾಯಕಿಯಾಗಿ ಅಭಿನಯಿಸಿದ್ದು, ಡೈನಮಿಕ್ ಸ್ಟಾರ್ ದೇವರಾಜ್, ಚಿಕ್ಕಣ್ಣ ಸೇರಿದಂತೆ ಮೊದಲಾದ ಕಲಾವಿದರು ಬಣ್ಣ ಹಚ್ಚಿದ್ದಾರೆ. ಸರವಣನ್ ನಟರಾಜ ಛಾಯಾಗ್ರಹಣವಿದ್ದು, ವಿಕ್ಕಿ ಸಂಕಲನವಿದೆ. ಖ್ಯಾತ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular