ಇಂದು ‘ಭೀಮ’ ಚಿತ್ರದಿಂದ ಬರಲಿದೆ ‘ಬೂಮ್ ಬೂಮ್ ಬೆಂಗಳೂರು’ ಹಾಡು

ಮುಂದಿನ ತಿಂಗಳು ಆಗಸ್ಟ್ 9ಕ್ಕೆ ತೆರೆ ಮೇಲೆ ಬರಲು ಸಜ್ಜಾಗಿರುವ ‘ಭೀಮ’ ಚಿತ್ರದ ಮೇಲೆ ದುನಿಯಾ ವಿಜಯ್ ಅಭಿಮಾನಿಗಳಲ್ಲಿ ಈಗಾಗಲೇ ಸಾಕಷ್ಟು ಕುತೂಹಲ ಮೂಡಿದ್ದು, ತೆರೆ ಮೇಲೆ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದಾರೆ. ಸಲಗ ಬಳಿಕ ಮತ್ತೊಮ್ಮೆ ದುನಿಯಾ ವಿಜಯ್ ನಿರ್ದೇಶಿಸುವ ಮೂಲಕ ನಾಯಕ ನಟನಾಗಿ ಅಭಿನಯಿಸಿದ್ದು, ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುವುದು ಪಕ್ಕ ಎನ್ನಲಾಗಿದೆ. ‘ಭೀಮ’  ಸಿನಿಮಾದ ‘ಬೂಮ್ ಬೂಮ್ ಬೆಂಗಳೂರು’ ಎಂಬ ಲಿರಿಕಲ್ ಹಾಡೊಂದನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಘೋಷಣೆ ಮಾಡಿದೆ. ಈ ಹಾಡಿಗೆ ಜೆಜಿ ಕುಮಾರ್ ಧ್ವನಿಯಾಗಿದ್ದು, ಚರಣ್ ರಾಜ್ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.

ಕೃಷ್ಣ ಕ್ರಿಯೇಶನ್ಸ್ ಹಾಗೂ ಜಗದೀಶ್ ಫಿಲಂಸ್ ಬ್ಯಾನರ್ ನಲ್ಲಿ ಕೃಷ್ಣ ಸಾರ್ಥಕ್ ಹಾಗೂ ಜಗದೀಶ್ ಗೌಡ  ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ದುನಿಯಾ ವಿಜಯ್ ಅವರಿಗೆ ಜೋಡಿಯಾಗಿ ಅಶ್ವಿನಿ ಅಭಿನಯಿಸಿದ್ದಾರೆ. ಶಿವಸೇನಾ ಛಾಯಾಗ್ರಹಣ ಹಾಗೂ ಧನಂಜಯ್ ಅವರ ನೃತ್ಯ ನಿರ್ದೇಶನವಿದ್ದು, ಚರಣ್ ರಾಜ್ ಸಂಗೀತ ಸಂಯೋಜನೆ ಮಾಡಿದ್ದಾರೆ.

https://twitter.com/aanandaaudio/status/1814226238220779798

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read