
ಪಾಕಿಸ್ತಾನ ತಂಡದ ವೇಗದ ಬೌಲರ್ ಹಸನ್ ಅಲಿ ಈ ಬಾರಿಯ ವಿಶ್ವಕಪ್ ನಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ತೋರುತ್ತಿದ್ದು, ಇಂದು ಆಸ್ಟ್ರೇಲಿಯಾ ತಂಡದ ಎದುರು ನಡೆಯುತ್ತಿರುವ ವಿಶ್ವಕಪ್ ಪಂದ್ಯದಲ್ಲಿ ಎರಡು ವಿಕೆಟ್ ಪಡೆದುಕೊಂಡರೆ ನೂರು ವಿಕೆಟ್ ಗಳ ಗಡಿ ಮುಟ್ಟಲಿದ್ದಾರೆ.
ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್ ನಲ್ಲಿ 63 ಪಂದ್ಯವನ್ನಾಡಿರುವ ಹಸನ್ ಅಲಿ 98 ವಿಕೆಟ್ಗಳನ್ನು ಕಬಳಿಸಿದ್ದಾರೆ.ಇನ್ನು ಟಿ 20 ಕ್ರಿಕೆಟ್ ನಲ್ಲಿ, ಆಡಿರುವ 50 ಪಂದ್ಯಗಳಲ್ಲಿ 60 ವಿಕೆಟ್ ಪಡೆದುಕೊಂಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂದಿನ ಪಂದ್ಯದಲ್ಲಿ ಪಾಕಿಸ್ತಾನ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿದ್ದು, ಆಸ್ಟ್ರೇಲಿಯಾ ತಂಡ ಒಂದು ವಿಕೆಟ್ ನಷ್ಟವಿಲ್ಲದೆ 96 ರನ್ಗಳ ಜೊತೆ ಆಟವಾಡಿದ್ದಾರೆ.

 
			 
		 
		 
		 
		 Loading ...
 Loading ... 
		 
		 
		