ಇಂದು ನೂತನ ಕೇಂದ್ರ ಸಚಿವರಾಗಿ ಹೆಚ್. ಡಿ. ಕುಮಾರಸ್ವಾಮಿ ರಾಜ್ಯಕ್ಕೆ ಮೊದಲ ಬಾರಿಗೆ ಆಗಮನ: ಅದ್ದೂರಿ ಸ್ವಾಗತಕ್ಕೆ ಸಿದ್ಧತೆ

ಬೆಂಗಳೂರು: ಭಾರತ ಸರ್ಕಾರದ ಸಂಪುಟ ದರ್ಜೆ ಉಕ್ಕು ಮತ್ತು, ಬೃಹತ್ ಕೈಗಾರಿಕೆ ಖಾತೆ ನೂತನ ಸಚಿವರಾಗಿ ಅಧಿಕಾರವಹಿಸಿಕೊಂಡಿರುವ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ರಾಜ್ಯಕ್ಕೆ ಮೊದಲ ಭೇಟಿ ನೀಡಲಿದ್ದಾರೆ.

ಜೂನ್ 14ರ ಶುಕ್ರವಾರದಂದು ಬೆಳಗ್ಗೆ ದೆಹಲಿಯಿಂದ ಹೊರಟು 11:30 ಕ್ಕೆ ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಕುಮಾರಸ್ವಾಮಿಯವರಿಗೆ ಅದ್ದೂರಿ ಸ್ವಾಗತ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮಧ್ಯಾಹ್ನ 1 ಗಂಟೆಗೆ ಜೆಡಿಎಸ್ ಕಚೇರಿ ಜೆಪಿ ಭವನಕ್ಕೆ ಆಗಮಿಸಲಿರುವ ಹೆಚ್.ಡಿ. ಕುಮಾರಸ್ವಾಮಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಅದ್ದೂರಿ ಸ್ವಾಗತಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read