HomeLatest Newsಇಂದು ಸಿ.ಎಸ್.ಕೆ. ವಿರುದ್ಧ ಹೈವೋಲ್ಟೇಜ್ ಪಂದ್ಯ: ಸತತ ಎರಡನೇ ಗೆಲುವಿನ ಉತ್ಸಾಹದಲ್ಲಿ ಆರ್‌.ಸಿ.ಬಿ.

ಇಂದು ಸಿ.ಎಸ್.ಕೆ. ವಿರುದ್ಧ ಹೈವೋಲ್ಟೇಜ್ ಪಂದ್ಯ: ಸತತ ಎರಡನೇ ಗೆಲುವಿನ ಉತ್ಸಾಹದಲ್ಲಿ ಆರ್‌.ಸಿ.ಬಿ.

ಬೆಂಗಳೂರು: ಐಪಿಎಲ್ ಉದ್ಘಾಟನಾ ಪಂದ್ಯದ ನಂತರ ಸತತ ಎರಡನೇ ಗೆಲುವಿನ ಉತ್ಸಾಹದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌.ಸಿ.ಬಿ.) ಭಾನುವಾರ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್(ಸಿ.ಎಸ್.ಕೆ.) ಎದುರಿಸಲಿದೆ.

ಮಾರ್ಚ್ 28ರಂದು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯವನ್ನು 6 ವಿಕೆಟ್ ಗಳಿಂದ ಗೆದ್ದ ಆರ್‌.ಸಿ.ಬಿ. ಸುದೀರ್ಘ ವಿಶ್ರಾಂತಿ ಬಳಿಕ ಇಂದು ಎರಡನೇ ಪಂದ್ಯವನ್ನು ಆಡುತ್ತಿದೆ.

ರಜತ್ ಪಾಟಿದಾರ್, ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಆರ್‌.ಸಿ.ಬಿ. ಬಲಿಷ್ಠ ತಂಡವಾಗಿದೆ. ಚೆನ್ನೈ ತಂಡ ಕೂಡ ಗೆಲುವಿಗೆ ಕಾರ್ಯತಂತ್ರ ರೂಪಿಸಿದೆ. ಇಂದು ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದ್ದು, ಉಭಯ ತಂಡಗಳ ಆಟಗಾರರು ಅಭ್ಯಾಸ ನಡೆಸಿದ್ದು, ಪಂದ್ಯ ಗೆಲ್ಲಲು ಕಾರ್ಯತಂತ್ರ ರೂಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular