HomeLatest Newsಇಂದು ಶಾಮನೂರು ಶಿವಶಂಕರಪ್ಪ ನುಡಿನಮನ: ಖರ್ಗೆ, ಸಿದ್ದರಾಮಯ್ಯ ಸೇರಿ ಗಣ್ಯರು ಭಾಗಿ

ಇಂದು ಶಾಮನೂರು ಶಿವಶಂಕರಪ್ಪ ನುಡಿನಮನ: ಖರ್ಗೆ, ಸಿದ್ದರಾಮಯ್ಯ ಸೇರಿ ಗಣ್ಯರು ಭಾಗಿ

ದಾವಣಗೆರೆ: ಇತ್ತೀಚೆಗೆ ನಿಧನರಾದ ಶಾಸಕ, ಮಾಜಿ ಸಚಿವ ಡಾ. ಶಾಮನೂರು ಶಿವಶಂಕರಪ್ಪ ಅವರ ನುಡಿ ನಮನ ಕಾರ್ಯಕ್ರಮ ಡಿಸೆಂಬರ್ 26ರಂದು ಬೆಳಗ್ಗೆ 10:15ಕ್ಕೆ ನಡೆಯಲಿದೆ.

ನೂರು ಎಕರೆ ಪ್ರದೇಶದಲ್ಲಿ ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ಸಿದ್ಧಪಡಿಸಲಾಗಿದೆ. ದಾವಣಗೆರೆಯ ಬಂಬೂ ಬಜಾರ್ ಮುಖ್ಯ ರಸ್ತೆಯಲ್ಲಿರುವ ಶ್ರೀ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರು, ಶಾಸಕರು, ಭಾಗವಹಿಸಲಿದ್ದಾರೆ. ಪಂಚಪೀಠಾಧೀಶ್ವರರು, ಸಿರಿಗೆರೆ ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸೇರಿದಂತೆ ಹಲವು ಶ್ರೀಗಳು ಭಾಗವಹಿಸಲಿದ್ದಾರೆ. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ ನುಡಿ ನಮನ ಕಾರ್ಯಕ್ರಮ ಆರಂಭವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

13ನೇ ದಿನದ ಕಾರ್ಯದ ಅಂಗವಾಗಿ ನಗರದ ಅನೇಕ ಕಲ್ಯಾಣ ಮಂಟಪಗಳು ಸೇರಿದಂತೆ ವಿವಿಧೆಡೆ ಸಾರ್ವಜನಿಕರು, ಅಭಿಮಾನಿಗಳಿಗೆ ಭೋಜನದ ವ್ಯವಸ್ಥೆ ಮಾಡಲಾಗಿದೆ.

ಮಲ್ಲಿಕಾರ್ಜುನ ಖರ್ಗೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಿದ್ದರಾಮಯ್ಯ ಪುತ್ಥಳಿ ಅನಾವರಣ ಮಾಡುವರು. ಡಿ.ಕೆ. ಶಿವಕುಮಾರ್ ಸಾಕ್ಷ್ಯ ಚಿತ್ರ ಬಿಡುಗಡೆ ಮಾಡಲಿದ್ದಾರೆ. ಎಸ್.ಎಸ್. ಮಲ್ಲಿಕಾರ್ಜುನ್ ಮತ್ತು ಪ್ರಭಾ ಮಲ್ಲಿಕಾರ್ಜುನ್ ಸ್ವಾಗತ ಮತ್ತು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಕಿರು ಹೊತ್ತಿಗೆ ಬಿಡುಗಡೆ ಮಾಡಲಿದ್ದಾರೆ. ಬಿ.ಎಸ್. ಯಡಿಯೂರಪ್ಪ, ಕೆ.ಸಿ.ವೇಣುಗೋಪಾಲ್, ಜಗದೀಶ್ ಶೆಟ್ಟರ್, ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular