ಆಟವಾಡುತ್ತಿದ್ದ ವೇಳೆ ತೆರೆದ ಬೋರ್ ವೆಲ್ ಗೆ ಬಿದ್ದ 2 ವರ್ಷದ ಬಾಲಕಿ….! ರಕ್ಷಣಾ ಕಾರ್ಯಾಚರಣೆ ಆರಂಭ

ತೆರೆದ ಬೋರ್ ವೆಲ್ ಗೆ 2 ವರ್ಷದ ಬಾಲಕಿ ಬಿದ್ದಿರೋ ಆಘಾತಕಾರಿ ಘಟನೆ ಗುಜರಾತ್‌ನ ಜಾಮ್‌ನಗರ ಜಿಲ್ಲೆಯಿಂದ ವರದಿಯಾಗಿದೆ. ಕೃಷಿ ಜಮೀನಿನಲ್ಲಿ ಪಾಳುಬಿದ್ದ ತೆರೆದ ಬೋರ್‌ವೆಲ್‌ಗೆ ಬಿದ್ದು 20 ಅಡಿ ಆಳದಲ್ಲಿ ಬಾಲಕಿ ಸಿಲುಕಿಕೊಂಡಿದ್ದಾಳೆ. ಆಟವಾಡುತ್ತಿದ್ದ ವೇಳೆ ಮಗು ಬಿದ್ದಿದ್ದು, ಸ್ಥಳೀಯ ಅಧಿಕಾರಿಗಳು ಮಗುವನ್ನು ರಕ್ಷಿಸುವಲ್ಲಿ ನಿರತರಾಗಿದ್ದಾರೆ.

ಜಾಮ್‌ನಗರದಿಂದ 40 ಕಿ.ಮೀ ದೂರದಲ್ಲಿರುವ ತಮಚನ್ ಗ್ರಾಮದ ಜಮೀನಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಬುಡಕಟ್ಟು ಕುಟುಂಬಕ್ಕೆ ಸೇರಿದ ಪುಟ್ಟ ಮಗು ಆಟವಾಡುತ್ತಿದ್ದ ವೇಳೆ ಸುಮಾರು 200 ಅಡಿ ಆಳದ ಕೊಳವೆಬಾವಿಗೆ ಬಿದ್ದಿದೆ . ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಜಾಮ್ ನಗರ ತಾಲೂಕು ಅಭಿವೃದ್ಧಿ ಅಧಿಕಾರಿ ಎನ್.ಎ. ಸರ್ವಯ್ಯ ತಿಳಿಸಿದ್ದಾರೆ.

ಜಾಮ್‌ನಗರದಿಂದ ಬಂದಿರುವ ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಬಳಸಿಕೊಂಡು ಬೆಳಿಗ್ಗೆ 11 ಗಂಟೆಯ ಸುಮಾರಿಗೆ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದೇವೆ. ಬಾಲಕಿ ಸುಮಾರು 20 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದು, ಆಕೆಯನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ ಎಂದು ಸರ್ವಯ್ಯ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read