ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: ಪ್ರತ್ಯೇಕ ಸಚಿವಾಲಯ, ತೊಗರಿಗೆ ವಿಶೇಷ ಪ್ಯಾಕೇಜ್: ಸಿಎಂ ಭರವಸೆ

ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತ್ಯೇಕ ಸಚಿವಾಲಯ ರಚನೆ ಬಗ್ಗೆ ಈ ಹಿಂದೆಯೂ ನಾವು ಹೇಳಿದ್ದೇವೆ. ಬಹಳ ವರ್ಷಗಳಿಂದ ಪ್ರತ್ಯೇಕ ಸಚಿವಾಲಯದ ಬೇಡಿಕೆ ಇದೆ. ಈ ಬಗ್ಗೆ ಕ್ರಮ ವಹಿಸಲಾಗಿದೆ. ತೊಗರಿ ಬೆಳೆಗೆ ಪ್ರತ್ಯೇಕ ಪ್ಯಾಕೇಜ್ ಘೋಷಿಸುವಂತೆ ರೈತರ ಬೇಡಿಕೆ ಇದ್ದು, ತೊಗರಿ ಬೆಳೆ ಸ್ಥಿತಿಗತಿ ವರದಿ ಕೇಳಿದ್ದೇವೆ. ವರದಿ ಬಂದ ನಂತರ ಆ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಆರೋಗ್ಯ ವ್ಯವಸ್ಥೆಯಲ್ಲಿ ಜಯದೇವ ಆಸ್ಪತ್ರೆ ಮಹತ್ವದ್ದಾಗಿದೆ. ಮಲ್ಲಿಕಾರ್ಜುನ ಖರ್ಗೆಯವರ ಹೋರಾಟದ ಫಲವಾಗಿ 371 ಜೆ ಜಾರಿಯಾಗಿದೆ. 371 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಉದ್ಘಾಟಿಸಿದ್ದೇವೆ ಕಲಬುರಗಿ ಏರ್ಪೋರ್ಟ್ ನಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read