HomeKarnatakaವಾಹನ ಸವಾರರಿಗೆ ಮಹತ್ವದ ಸೂಚನೆ: ಏಪ್ರಿಲ್ 1ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಸಂಪೂರ್ಣ ಸ್ಥಗಿತ

ವಾಹನ ಸವಾರರಿಗೆ ಮಹತ್ವದ ಸೂಚನೆ: ಏಪ್ರಿಲ್ 1ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಸಂಪೂರ್ಣ ಸ್ಥಗಿತ

ಬೆಂಗಳೂರು: ವಾಹನಸವಾರರಿಗೆ ಮುಖ್ಯ ಮಾಹಿತಿಯೊಂದಿಲ್ಲಿದೆ. ಏಪ್ರಿಲ್ 1ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಸಂಪೂರ್ಣ ಬಂದ್ ಆಗಲಿದೆ. ಈ ಬಗ್ಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮಾಹಿತಿ ನೀಡಿದೆ.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಸುವ ವಾಹನ ಸವಾರರಿಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಹತ್ವದ ಸೂಚನೆ ನೀಡಿದ್ದು, ಏಪ್ರಿಲ್ 1, 2026 ರಿಂದ ಜಾರಿಗೆ ಬರುವಂತೆ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.

ಈ ಬಗ್ಗೆ ನೆಲಮಂಗಲ ಟೋಲ್ ಸೇರಿದಂತೆ ಪ್ರಮುಖ ಹೆದ್ದಾರಿಗಳಲ್ಲಿ ಈಗಾಗಲೇ ಸಾರ್ವಜನಿಕ ಪ್ರಕಟಣೆಯ ಫಲಕಗಳನ್ನು ಹಾಕಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೊಸ ನಿಯಮದ ಪ್ರಕಾರ, ಟೋಲ್ ಬೂತ್​​ಗಳಲ್ಲಿ ನಗದು ಪಡೆಯಲಾಗುವುದಿಲ್ಲ. ಸುಗಮ ಪ್ರಯಾಣಕ್ಕಾಗಿ ಕಡ್ಡಾಯವಾಗಿ ಫಾಸ್ಟಾಗ್ ಅಥವಾ ಯುಪಿಐ ಮೂಲಕವೇ ಪಾವತಿ ಮಾಡಬೇಕಿದೆ. ಏಪ್ರಿಲ್ 15 ರಿಂದ ಫಾಸ್ಟಾಗ್ ಸ್ಕ್ಯಾನ್ ಆಗದಿದ್ದರೆ ಸಿಬ್ಬಂದಿ ಮ್ಯಾನುಯಲ್ ಆಗಿ ವಾಹನ ಸಂಖ್ಯೆ ನಮೂದಿಸಿ ಟೋಲ್ ಪಡೆಯುವುದನ್ನು ರದ್ದುಗೊಳಿಸಲಾಗಿದೆ.

ಕೇವಲ ಆಟೋಮ್ಯಾಟಿಕ್ ಫಾಸ್ಟ್​ಟ್ಯಾಗ್ ರೀಡರ್ ಮೂಲಕ ಮಾತ್ರ ಪಾವತಿಗೆ ಅವಕಾಶವಿರುತ್ತದೆ. ನೆಲಮಂಗಲ-ಹಾಸನ ಹಾಗೂ ಬೆಂಗಳೂರು-ತುಮಕೂರು-ಪುಣೆ ಹೆದ್ದಾರಿಯ ಟೋಲ್ ಪ್ಲಾಜಾಗಳಲ್ಲಿ ಹೊಸ ನಿಯಮದ ಬಗ್ಗೆ ಮಾಹಿತಿ ನೀಡಲಾಗಿದೆ.

ವಾಹನ ಸವಾರರು ತಮ್ಮ ಫಾಸ್ಟ್​ಟ್ಯಾಗ್ ಸಕ್ರಿಯವಾಗಿದೆಯೇ ಮತ್ತು ಅದರಲ್ಲಿ ಪೂರಕ ಬ್ಯಾಲೆನ್ಸ್ ಇದೆಯೇ ಎಂದು ಖಚಿತಪಡಿಸಿಕೊಂಡು ಹೆದ್ದಾರಿಗಳಲ್ಲಿ ಸಾಗುವುದು ಒಳಿತು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular