HomeKarnatakaBIG NEWS: 21 ಲಕ್ಷ ಮೌಲ್ಯದ ಟೊಮೆಟೊ ಸಾಗಿಸುತ್ತಿದ್ದ ಲಾರಿ ನಾಪತ್ತೆ

BIG NEWS: 21 ಲಕ್ಷ ಮೌಲ್ಯದ ಟೊಮೆಟೊ ಸಾಗಿಸುತ್ತಿದ್ದ ಲಾರಿ ನಾಪತ್ತೆ

ಕೋಲಾರ: ಟೊಮೆಟೊಗೆ ಬಂಗಾರದ ಬೆಲೆ ಬಂದಿರುವ ಬೆನ್ನಲ್ಲೇ ಟೊಮೆಟೊ ಸಾಗಿಸುತ್ತಿದ್ದ ವಾಹನಗಳನ್ನೇ ಖದೀಮರು ಕದ್ದು ಎಸ್ಕೇಪ್ ಆಗುತ್ತಿರುವ ಪ್ರಕರಣ ಹೆಚ್ಚುತ್ತಿದೆ. ಕೋಲಾರದಿಂದ ರಾಜಸ್ಥಾನಕ್ಕೆ ಸಾಗಿಸುತ್ತಿದ್ದ ಟೊಮೆಟೊ ಲಾರಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

21 ಲಕ್ಷ ರೂಪಾಯಿ ಮೌಲ್ಯದ ಟೊಮೆಟೊ ತುಂಬಿದ್ದ ಲಾರಿ ನಾಪತ್ತೆಯಾಗಿದೆ. ಜುಲೈ 27ರಂದು ಕೋಲಾರದಿಂದ ರಾಜಸ್ಥಾನದ ಜೈಪುರಕ್ಕೆ ಟೊಮೆಟೊ ತುಂಬಿಕೊಂಡು ಲಾರಿ ಸಾಗಿದೆ. ಕೋಲಾರದ ಮೆಹರ್ ಟ್ರಾನ್ಸ್ ಪೋರ್ಟ್ ಗೆ ಸೇರಿದ ಲಾರಿ ಇದಾಗಿದ್ದು, ಈಗ ಲಾರಿ ಚಾಲಕ ಮೊಬೈಲ್ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೋಲಾರ ಮಾರುಕಟ್ಟೆಯಿಂದ ಲಾರಿ ಹೊರಟಿತ್ತು. ಟೊಮೆಟೊ ಸಾಗಿಸುತ್ತಿದ್ದ ಲಾರಿ ಚಾಲಕ ಸಂಪರ್ಕಕ್ಕೆ ಸಿಗದ ಕಾರಣಕ್ಕೆ ಕಂಗಾಲಾಗಿರುವ ಮಾಲೀಕರು ಲಾರಿ ನಾಪತ್ತೆಯಾಗಿದೆ ಎಂದು ಕೋಲಾರ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular