HomeBusinessಸರ್ಕಾರದಿಂದಲೇ ಸಬ್ಸಿಡಿ ದರದಲ್ಲಿ ಟೊಮೆಟೊ ಮಾರಾಟ

ಸರ್ಕಾರದಿಂದಲೇ ಸಬ್ಸಿಡಿ ದರದಲ್ಲಿ ಟೊಮೆಟೊ ಮಾರಾಟ

ನವದೆಹಲಿ: ಟೊಮೆಟೊ ದರ ಗಗನಕ್ಕೇರಿದ್ದು, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಈ ಹಿನ್ನೆಲೆಯಲ್ಲಿ ಬೆಲೆ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಂಡಿದೆ.

ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಸಹಕಾರಿ ಗ್ರಾಹಕರ ಮಹಾ ಒಕ್ಕೂಟ(NCCF) ಸಬ್ಸಿಡಿ ದರದಲ್ಲಿ ಟೊಮೆಟೊ ಮಾರಾಟ ಮಾಡಲಿದೆ. ದೆಹಲಿಯ ವಿವಿಧ ಪ್ರದೇಶಗಳಲ್ಲಿ ಎನ್‌ಸಿಸಿಎಫ್ ನ ರಿಟೇಲ್ ಸ್ಟೋರ್ ಮತ್ತು ಮೊಬೈಲ್ ವಾಹನಗಳ ಮೂಲಕ ಟೊಮೆಟೊ ಮಾರಾಟ ಮಾಡಲಾಗುವುದು.

ಕೆಜಿಗೆ 60 ರೂಪಾಯಿ ದರದಲ್ಲಿ ಟೊಮೆಟೊ ಮಾರಾಟ ಮಾಡಲಿದ್ದು, ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಚಾಲನೆ ನೀಡಿದ್ದಾರೆ. ದೇಶದ ಹಲವು ಕಡೆ ಟೊಮೆಟೊ ದರ ಕೆಜಿಗೆ 70 ರೂಪಾಯಿಗಿಂತಲೂ ಅಧಿಕವಾಗಿದೆ. ದೆಹಲಿಯ ಹಲವು ಕಡೆ 120 ರೂ.ವರೆಗೂ ಏರಿಕೆಯಾಗಿದ್ದು, ಗ್ರಾಹಕರಿಗೆ ನುಂಗಲಾರದ ತುತ್ತಾಗಿದೆ. ಹೀಗಾಗಿ ಬೆಲೆ ನಿಯಂತ್ರಣ ಉದ್ದೇಶದಿಂದ ಕೇಂದ್ರ ಸರ್ಕಾರ 60 ರೂ. ದರದಲ್ಲಿ ಟೊಮೆಟೊ ಮಾರಾಟ ಮಾಡಲಿದೆ. ಈ ಹಿಂದೆ ಈರುಳ್ಳಿ ದರ ಏರಿಕೆಯಾದ ಸಂದರ್ಭದಲ್ಲಿಯೂ ಇದೇ ರೀತಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular