HomeBusinessಗ್ರಾಹಕರಿಗೆ ಶಾಕಿಂಗ್ ನ್ಯೂಸ್: ಟೊಮೆಟೊ ದರ ಕೆಜಿಗೆ 300 ರೂ. ಗೆ ಏರಿಕೆ ಸಾಧ್ಯತೆ

ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ಟೊಮೆಟೊ ದರ ಕೆಜಿಗೆ 300 ರೂ. ಗೆ ಏರಿಕೆ ಸಾಧ್ಯತೆ

ನವದೆಹಲಿ: ಕಳೆದ ತಿಂಗಳಿಂದ ಏರುಗತಿಯಲ್ಲಿ ಸಾಗುತ್ತಿರುವ ಟೊಮೆಟೊ ದರ ಹೊಸ ದಾಖಲೆ ಬರೆಯುವ ಸಾಧ್ಯತೆ ಇದೆ.

ಸದ್ಯದಲ್ಲೇ ಟೊಮೆಟೊ ದರ 300 ರೂ. ತಲುಪುವ ಸಾಧ್ಯತೆ ಇದೆ ಎಂದು ಸಗಟು ಮಾರುಕಟ್ಟೆಯ ವ್ಯಾಪಾರಿಗಳು ಹೇಳಿದ್ದಾರೆ. ದೇಶದ ವಿವಿಧೆಡೆ ಮಳೆ ಮತ್ತಿತರ ಕಾರಣಗಳಿಂದ ಟೊಮೆಟೊ ಬೆಳೆ ಕುಂಠಿತವಾಗಿ ಪೂರೈಕೆಯಲ್ಲಿ ಭಾರಿ ವ್ಯತ್ಯಯವಾಗಿದೆ. ಹೀಗಾಗಿ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಅನೇಕ ಭಾಗದಲ್ಲಿ ಟೊಮೆಟೊ ದರ ಗಗನಕ್ಕೇರಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೆಹಲಿಯ ಸಗಟು ಮಾರುಕಟ್ಟೆಯಲ್ಲಿ ಗುರುವಾರ ಟೊಮೆಟೊ ಕೆಜಿಗೆ 220 ರೂ.ಗೆ ಮಾರಾಟವಾಗಿದೆ. ಬುಧವಾರ ಚಿಲ್ಲರೆ ದರ ಕೆಜಿಗೆ 259 ರೂ. ಇತ್ತು. ಪೂರೈಕೆಯಲ್ಲಿ ವ್ಯತ್ಯಯದ ಕಾರಣ ಸದ್ಯದಲ್ಲೇ ಟೊಮೆಟೊ ದರ ಕೆಜಿಗೆ 300 ರೂ. ಮುಟ್ಟಲಿದೆ ಎಂದು ಮಾರುಕಟ್ಟೆ ವ್ಯಾಪಾರಿಗಳು ಅಭಿಪ್ರಾಯಪಟ್ಟಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular