HomeKarnatakaBIG NEWS : ನಾಳೆ 'ಸಿಎಂ ಸಿದ್ದರಾಮಯ್ಯ' ಕೊಡಗು ಜಿಲ್ಲಾ ಪ್ರವಾಸ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ.!

BIG NEWS : ನಾಳೆ ‘ಸಿಎಂ ಸಿದ್ದರಾಮಯ್ಯ’ ಕೊಡಗು ಜಿಲ್ಲಾ ಪ್ರವಾಸ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ.!

ಮಡಿಕೇರಿ : ಕರ್ನಾಟಕ ಸರ್ಕಾರದ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ, 31 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಮುಖ್ಯಮಂತ್ರಿ ಅವರು ಜನವರಿ, 31 ರಂದು ಮಧ್ಯಾಹ್ನ 1.30 ಗಂಟೆಗೆ ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಕಾವೇರಿ ಹೈಸ್ಕೂಲ್ ಆವರಣದ ಹೆಲಿಪ್ಯಾಡ್ಗೆ ಆಗಮಿಸಲಿದ್ದಾರೆ.

ನಂತರ ಮಧ್ಯಾಹ್ನ 2.15 ಗಂಟೆಗೆ ಶ್ರೀ ಭಗಂಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ 2.30 ಗಂಟೆಗೆ ಕಾವೇರಿ ಉಗಮಸ್ಥಾನ ಶ್ರೀಕ್ಷೇತ್ರ ತಲಕಾವೇರಿಗೆ ಭೇಟಿ ನೀಡಲಿದ್ದಾರೆ.ನಂತರ ಮಧ್ಯಾಹ್ನ 3 ಗಂಟೆಗೆ ಜಲಸಂಪನ್ಮೂಲ ಇಲಾಖೆ, ಕಾವೇರಿ ನೀರಾವರಿ ನಿಗಮ ನಿಯಮಿತ ವತಿಯಿಂದ ಆಯೋಜಿಸಿರುವ ಕೊಡಗು ಜಿಲ್ಲೆಯ ಭಾಗಮಂಡಲದ ಹತ್ತಿರ ಮಡಿಕೇರಿ-ತಲಕಾವೇರಿ ಮತ್ತು ನಾಪೋಕ್ಲು-ತಲಕಾವೇರಿ ರಸ್ತೆಗಳ ಛೇದಕದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಮೇಲು ಸೇತುವೆ ನಿರ್ಮಾಣ ಕಾಮಗಾರಿಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಅಪರ ಕಾರ್ಯದರ್ಶಿ ಕೆ.ಚಿರಂಜೀವಿ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular