ಮಡಿಕೇರಿ: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ, ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅಕ್ಟೋಬರ್ 17 ರಂದು ಮಧ್ಯಾಹ್ನ 1.44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜರುಗಲಿದೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯ ಅಜಯ್ ಮಾಕನ್, ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಹೆಚ್.ಅರುಣ್ ಮಾಚಯ್ಯ, ಭಾಗಮಂಡಲ ಗ್ರಾ.ಪಂ.ಅಧ್ಯಕ್ಷ ಕಾಳನ ರವಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ, ತಾಲ್ಲೂಕು ಅಧ್ಯಕ್ಷ ಎಂ.ಜಿ.ಮೋಹನ್ ದಾಸ್, ಇತರರು ಪಾಲ್ಗೊಳ್ಳಲಿದ್ದಾರೆ.
ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆಯ ಆಯುಕ್ತ ಡಾ.ವೆಂಕಟೇಶ್ ಎಂ.ವಿ., ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ತಹಶೀಲ್ದಾರ್ ಶ್ರೀಧರ, ಶ್ರೀಭಗಂಡೇಶ್ವರ-ತಲಕಾವೇರಿ ದೇವಾಲಯದ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್, ಭಗಂಡೇಶ್ವರ ದೇವಾಲಯದ ತಕ್ಕ ಮುಖ್ಯಸ್ಥರಾದ ಬಳ್ಳಡ್ಕ ಸಿ.ಅಪ್ಪಾಜಿ, ತಲಕಾವೇರಿ ದೇವಾಲಯದ ತಕ್ಕ ಮುಖ್ಯಸ್ಥರಾದ ಕೋಡಿ.ಯು. ಮೋಟಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.