HomeLatest Newsನಾಳೆ ತೀರ್ಥಸ್ವರೂಪಿಣಿಯಾಗಿ ಕಾವೇರಿ ಮಾತೆ ದರ್ಶನ: ಶ್ರೀ ಕ್ಷೇತ್ರ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವಕ್ಕೆ ಡಿಸಿಎಂ ಡಿಕೆ,...

ನಾಳೆ ತೀರ್ಥಸ್ವರೂಪಿಣಿಯಾಗಿ ಕಾವೇರಿ ಮಾತೆ ದರ್ಶನ: ಶ್ರೀ ಕ್ಷೇತ್ರ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವಕ್ಕೆ ಡಿಸಿಎಂ ಡಿಕೆ, ರಾಮಲಿಂಗಾರೆಡ್ಡಿ ಸೇರಿ ಗಣ್ಯರ ದಂಡು

ಮಡಿಕೇರಿ: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ, ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅಕ್ಟೋಬರ್ 17 ರಂದು ಮಧ್ಯಾಹ್ನ 1.44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜರುಗಲಿದೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯ ಅಜಯ್ ಮಾಕನ್, ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಹೆಚ್.ಅರುಣ್ ಮಾಚಯ್ಯ, ಭಾಗಮಂಡಲ ಗ್ರಾ.ಪಂ.ಅಧ್ಯಕ್ಷ ಕಾಳನ ರವಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ, ತಾಲ್ಲೂಕು ಅಧ್ಯಕ್ಷ ಎಂ.ಜಿ.ಮೋಹನ್ ದಾಸ್, ಇತರರು ಪಾಲ್ಗೊಳ್ಳಲಿದ್ದಾರೆ.

ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆಯ ಆಯುಕ್ತ ಡಾ.ವೆಂಕಟೇಶ್ ಎಂ.ವಿ.,  ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ತಹಶೀಲ್ದಾರ್ ಶ್ರೀಧರ, ಶ್ರೀಭಗಂಡೇಶ್ವರ-ತಲಕಾವೇರಿ ದೇವಾಲಯದ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್, ಭಗಂಡೇಶ್ವರ ದೇವಾಲಯದ ತಕ್ಕ ಮುಖ್ಯಸ್ಥರಾದ ಬಳ್ಳಡ್ಕ ಸಿ.ಅಪ್ಪಾಜಿ, ತಲಕಾವೇರಿ ದೇವಾಲಯದ ತಕ್ಕ ಮುಖ್ಯಸ್ಥರಾದ ಕೋಡಿ.ಯು. ಮೋಟಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular