HomeEntertainmentನಾಳೆ 'ಗೋಲ್ಡನ್ ಸ್ಟಾರ್' ಗಣೇಶ್ ಹುಟ್ಟುಹಬ್ಬ ; ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿದ ನಟ..!

ನಾಳೆ ‘ಗೋಲ್ಡನ್ ಸ್ಟಾರ್’ ಗಣೇಶ್ ಹುಟ್ಟುಹಬ್ಬ ; ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿದ ನಟ..!

ಬೆಂಗಳೂರು : ನಾಳೆ (ಜು.2) ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬ, ಈ ಹಿನ್ನೆಲೆ ಅಭಿಮಾನಿಗಳಿಗೆ ನಟ ಗಣೇಶ್ ವಿಶೇಷ ಮನವಿ ಮಾಡಿದ್ದಾರೆ.

‘’ನನ್ನ ಆತ್ಮೀಯ ಅಭಿಮಾನಿಗಳೇ, ಜುಲೈ 2 ರಂದು ನಾನು ನನ್ನ ಬೆಂಗಳೂರು ನಿವಾಸದಲ್ಲಿ ಲಭ್ಯವಿಲ್ಲ. ಅದೇಕೋ ತಮ್ಮೊಂದಿಗೆ ನನ್ನ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕೆಂಬ ನನ್ನ ಹಂಬಲ ಈ ಬಾರಿಯೂ ಕೈಗೂಡುತ್ತಿಲ್ಲ. ಹೀಗಾಗಿ ನನ್ನ ಪ್ರೀತಿಯ ಅಭಿಮಾನಿಗಳು ಮನೆಯ ಬಳಿ ಬಾರದೇ ತಾವು ಇದ್ದಲ್ಲಿಂದಲೇ ನನ್ನನ್ನು ಹರಸಿ, ಆಶೀರ್ವದಿಸಿ. ಮುಂದಿನ ವರ್ಷ ಖಂಡಿತ ಒಟ್ಟಿಗೆ ಹುಟ್ಟುಹಬ್ಬ ಆಚರಿಸೋಣ. ಅನಾನುಕೂಲಕ್ಕೆ ಕ್ಷಮೆಯಿರಲಿ’’ ಎಂದು ಸೋಶಿಯಲ್ ಮೀಡಿಯಾದಲ್ಲಿ ನಟ ಗಣೇಶ್ ಪೋಸ್ಟ್ ಹಂಚಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯೋಗರಾಜ್ ಭಟ್ ನಿರ್ದೇಶನದ ಮುಂಗಾರು ಮಳೆ ಸಿನಿಮಾದ ಮೂಲಕ ನಟ ಗಣೇಶ್ ಸ್ಯಾಂಡಲ್ ವುಡ್ ನಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದರು. ನಂತರ ಸಾಲು ಸಾಲು ಸಿನಿಮಾಗಳಲ್ಲಿ ನಟ ಗಣೇಶ್ ಗೆ ಅವಕಾಶ ಸಿಕ್ಕಿದ್ದು, ಕಾಮಿಡಿ , ಲವ್ ಸೆಂಟಿಮೆಂಟ್ ಸಿನಿಮಾದ ಮೂಲಕ ಸಾಕಷ್ಟು ಹೆಸರು ಮಾಡಿದರು. ನಾಳೆ (ಜು.2) ಗೋಲ್ಡನ್ ಸ್ಟಾರ್ ಗಣೇಶ್ ಗೆ ಹುಟ್ಟುಹಬ್ಬದ ಸಂಭ್ರಮ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular