HomeLive Newsಇಂದು ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ನಡುವಣ ಅಂತಿಮ ಟಿ 20 ಪಂದ್ಯ

ಇಂದು ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ನಡುವಣ ಅಂತಿಮ ಟಿ 20 ಪಂದ್ಯ

ಜೂನ್ 2 ರಿಂದ ವೆಸ್ಟ್ ಇಂಡೀಸ್ ಮತ್ತು ಯು ಎಸ್ ಎ ನಲ್ಲಿ ಟಿ ಟ್ವೆಂಟಿ ವಿಶ್ವಕಪ್ ಆರಂಭವಾಗುತ್ತಿದ್ದು, ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ. ಜಮೈಕಾದಲ್ಲಿ ನಡೆಯುತ್ತಿರುವ  ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ನಡುವಣ ಮೂರು  ಟಿ ಟ್ವೆಂಟಿ ಪಂದ್ಯಗಳಲ್ಲಿ ಈಗಾಗಲೇ ವೆಸ್ಟ್ ಇಂಡೀಸ್ ತಂಡ ದಕ್ಷಿಣ ಆಫ್ರಿಕಾದ ಎದುರು ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಸರಣಿ ಕೈವಶ ಮಾಡಿಕೊಂಡಿದೆ.

ಇಂದು ಅಂತಿಮ  ಟಿ ಟ್ವೆಂಟಿ ಪಂದ್ಯ ನಡೆಯುತ್ತಿದ್ದು, ವೆಸ್ಟ್ ಇಂಡೀಸ್ ತಂಡ ಕ್ಲೀನ್ ಸ್ವೀಪ್ ಮಾಡುವ ನಿರೀಕ್ಷೆಯಲ್ಲಿದೆ. ಇನ್ನು ದಕ್ಷಿಣ ಆಫ್ರಿಕಾ ತಂಡ ಎರಡು ಪಂದ್ಯಗಳಲ್ಲಿ ಕೆಲವೇ ಅಂತರಗಳಿಂದ ಸೋಲನುಭವಿಸಿದ್ದು, ಕೊನೆಯ ಪಂದ್ಯದಲ್ಲಾದರೂ ಜಯಭೇರಿಯಾಗಲಿದೆಯಾ ಕಾದು ನೋಡಬೇಕಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular