HomeLive Newsನಾಳೆ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಏಕದಿನ ಪಂದ್ಯ

ನಾಳೆ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಏಕದಿನ ಪಂದ್ಯ

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಣ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ ಎರಡು ಪಂದ್ಯಗಳಲ್ಲೂ ಜಯಭೇರಿ ಸಾಧಿಸಿದ್ದು, 2-0 ಇಂದ ಮುನ್ನಡೆ ಸಾಧಿಸಿದೆ. ಈ ಮೂಲಕ ಇಂಗ್ಲೆಂಡ್ ತಂಡ ತನ್ನ ತವರಿನಲ್ಲೇ ಬ್ಯಾಕ್ ಟು ಬ್ಯಾಕ್ ಸೋಲು ಕಂಡಿದೆ. ಆಸ್ಟ್ರೇಲಿಯಾದ ಓಪನಿಂಗ್ ಬ್ಯಾಟ್ಸ್ ಮ್ಯಾನ್ ಟ್ರಾವಿಸ್ ಹೆಡ್ ಇಂಗ್ಲೆಂಡ್ ಬೌಲರ್ಗಳ ಬೆವರಿಳಿಸುತ್ತಿದ್ದಾರೆ.

ನಾಳೆ ಮೂರನೇ ಏಕದಿನ ಪಂದ್ಯ ನಡೆಯುತ್ತಿದ್ದು, ಇಂಗ್ಲೆಂಡ್ ತಂಡಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಇಂಗ್ಲೆಂಡ್ ಈ ಪದ್ಯದಲ್ಲಿ ಸೋಲು ಕಂಡರೆ ಕಾಂಗರು ಪಡೆ ಸರಣಿಯನ್ನು ತನ್ನದಾಗಿಸಿಕೊಳ್ಳಲಿದೆ. ಯುವ ಆಟಗಾರರನ್ನೊಳಗೊಂಡ ಇಂಗ್ಲೆಂಡ್ ತಂಡ ತನ್ನ ಓಂ ಗ್ರೌಂಡ್ ನಲ್ಲಿ ಯಾವ ರೀತಿ ಪ್ರದರ್ಶನ ತೋರಲಿದೆ ಕಾದು ನೋಡಬೇಕಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular