HomeEntertainmentಇಂದು 'ಬಾನ ದಾರಿಯಲ್ಲಿ' ಚಿತ್ರದ ಟ್ರೈಲರ್ ರಿಲೀಸ್ ಇವೆಂಟ್

ಇಂದು ‘ಬಾನ ದಾರಿಯಲ್ಲಿ’ ಚಿತ್ರದ ಟ್ರೈಲರ್ ರಿಲೀಸ್ ಇವೆಂಟ್

ಸೆಪ್ಟೆಂಬರ್ 15 ರಂದು ರಾಜ್ಯದ್ಯಂತ ತೆರೆ ಮೇಲೆ ಬರಲು ಸಜ್ಜಾಗಿರುವ ‘ಬಾನ ದಾರಿಯಲ್ಲಿ’ ಸಿನಿಮಾದ ಟ್ರೈಲರ್ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಲಿದ್ದು,  ರಿಲೀಸ್ ಇವೆಂಟ್ ಕಾರ್ಯಕ್ರಮವನ್ನು ಚಿತ್ರತಂಡ ಅದ್ದೂರಿಯಾಗಿ ನೆರವೇರಿಸಲಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

ಗೋಲ್ಡನ್ ಸ್ಟಾರ್ ಗಣೇಶ್ ಸೇರಿದಂತೆ ರೀಷ್ಮಾ ನಾಣಯ್ಯ, ರುಕ್ಮಿಣಿ ವಸಂತ್, ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಈ ಚಿತ್ರವನ್ನು ಪ್ರೀತಂ ಗುಬ್ಬಿ ನಿರ್ದೇಶಿಸಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕಾಶ್ ಸಂಕಲನ, ಅಭಿಲಾಶ್ ಕಲ್ಲತ್ತಿ ಛಾಯಾಗ್ರಹಣವಿದ್ದು, ಮಾಸ್ತಿ ಅವರ ಸಂಭಾಷಣೆ ಇದೆ ಇದೊಂದು ಸ್ಪೋರ್ಟ್ಸ್ ಲವ್ ಸ್ಟೋರಿ  ಕಥಾಹಂದರ  ಹೊಂದಿರುವ ಸಿನಿಮಾ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular