ವಿಮಾನಯಾನ ಮಾರುಕಟ್ಟೆಯಲ್ಲಿ ಜಾಗತಿಕವಾಗಿ ಬೆಳೆಯುತ್ತಿರುವ ದೇಶಗಳಲ್ಲಿ ಭಾರತವು ಒಂದು. ಪ್ರಸ್ತುತ ಪ್ರಯಾಣಿಕರ ಸಂಖ್ಯೆಯಲ್ಲಿ ವಿಶ್ವದ ಮೂರನೇ ಅತಿದೊಡ್ಡ ದೇಶವಾಗಿದೆ.
ಸೆಪ್ಟೆಂಬರ್ 23, 2023ರ ನಾಗರಿಕ ವಿಮಾನಯಾನ ಸಚಿವಾಲಯದ ಮಾಹಿತಿಯ ಪ್ರಕಾರ ಸುಮಾರು 6,000 ವಿಮಾನಗಳ ಸಂಚಾರದ ಜೊತೆ ದೇಶೀಯ ವಿಮಾನಗಳಲ್ಲಿ ದಿನಕ್ಕೆ 4 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದಾರೆ.
ಕಳೆದ ವರ್ಷಕ್ಕೆ ಹೋಲಿಸಿದ್ರೆ ಇದೇ ಟೈಮ್‌ನಲ್ಲಿ ದಿನವೊಂದಕ್ಕೆ 3.50 ಲಕ್ಷ ಪ್ರಯಾಣಿಕರು ಮಾತ್ರ ಪ್ರಯಾಣಿಸುತ್ತಿದ್ದರು. ಈ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುವುದನ್ನು ಮ್ಯಾನೇಜ್ ಮಾಡಲು ಭಾರತವು ವಿಮಾನ ನಿಲ್ದಾಣಗಳನ್ನು ವೇಗವಾಗಿ ಅಭಿವೃದ್ಧಿಪಡಿಸುತ್ತಿದೆ.
ಭಾರತದಲ್ಲಿ ಆಗೊಮ್ಮೆ ಈಗೊಮ್ಮೆ ಹೊಸ ವಿಮಾನ ನಿಲ್ದಾಣಗಳು ಉದ್ಘಾಟನೆಯಾಗುತ್ತಿದ್ದರೆ, ಈಗಿರುವ ವಿಮಾನ ನಿಲ್ದಾಣಗಳಲ್ಲಿ ಸಂಚಾರ ದಟ್ಟಣೆ ಹೆಚ್ಚು ಸಹ ಆಗುತ್ತಿದೆ. ಇನ್ನು ಭಾರತದಲ್ಲಿ ದೆಹಲಿಯು ದೇಶೀಯ ಮತ್ತು ಅಂತರಾಷ್ಟ್ರೀಯ ಪ್ರಯಾಣಿಕರ ಸಂಚಾರದ ಲೆಕ್ಕಾಚಾರದಲ್ಲಿ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣ ಎಂಬ ಹೆಸರನ್ನು ಗಳಿಸಿದೆ. ಮುಂಬೈ ಎರಡನೇ ಸ್ಥಾನದಲ್ಲಿದ್ದರೆ ಬೆಂಗಳೂರು ಮೂರನೇ ಜನನಿಬಿಡ ವಿಮಾನ ನಿಲ್ದಾಣವಾಗಿದೆ.
ಟಾಪ್ 10 ಜನನಿಬಿಡ ವಿಮಾನ ನಿಲ್ದಾಣಗಳು (ದೇಶೀಯ ಮತ್ತು ಅಂತರಾಷ್ಟ್ರೀಯ)
1. ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ನವದೆಹಲಿ
2. ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಮುಂಬೈ
3. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಬೆಂಗಳೂರು
4. ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಹೈದರಾಬಾದ್
5. ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
6. ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಕೋಲ್ಕತ್ತಾ
7. ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಅಹಮದಾಬಾದ್
8. ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
9. ಪುಣೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
10. ದಾಬೋಲಿಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಗೋವಾ
ಪ್ರಯಾಣಿಕರ ಅಂಕಿ ಅಂಶವು ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನ ಪ್ರಯಾಣಿಕರನ್ನು ಒಳಗೊಂಡಿದೆ. ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಸಂಬಂಧಿಸಿದಂತೆ ಬೆಂಗಳೂರು ವಿಮಾನ ನಿಲ್ದಾಣ ಮೂರನೇ ಸ್ಥಾನದಲ್ಲಿದೆ. ಚೆನ್ನೈ ವಿಮಾನ ನಿಲ್ದಾಣವು 5 ನೇ ಸ್ಥಾನದಲ್ಲಿದೆ. ಕೊಚ್ಚಿ ವಿಮಾನ ನಿಲ್ದಾಣವು 4 ನೇ ಸ್ಥಾನದಲ್ಲಿದೆ.