HomeInternationalBIG NEWS: ಪಾಕಿಸ್ತಾನದಲ್ಲಿ ಮತ್ತೊಬ್ಬ ಉಗ್ರ ನಿಗೂಢ ಸಾವು: ಅಪರಿಚಿತ ವಾಹನಕ್ಕೆ ಬಲಿಯಾದ ಜೈಶ್-ಎ-ಮೊಹಮ್ಮದ್ ಉನ್ನತ...

BIG NEWS: ಪಾಕಿಸ್ತಾನದಲ್ಲಿ ಮತ್ತೊಬ್ಬ ಉಗ್ರ ನಿಗೂಢ ಸಾವು: ಅಪರಿಚಿತ ವಾಹನಕ್ಕೆ ಬಲಿಯಾದ ಜೈಶ್-ಎ-ಮೊಹಮ್ಮದ್ ಉನ್ನತ ಕಮಾಂಡರ್ ಮೌಲಾನಾ ಸಲ್ಮಾನ್ ಅಜರ್

ಇಸ್ಲಾಮಾಬಾದ್: ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್(ಜೆಇಎಂ) ನ ಉನ್ನತ ಕಮಾಂಡರ್ ಪಾಕಿಸ್ತಾನದ ಬಹಾವಲ್ಪುರದಲ್ಲಿ ಬುಧವಾರ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ.

ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಕೊಂದಿದೆ ಎಂದು ಸ್ಥಳೀಯ ಮೂಲಗಳು ಹೇಳಿವೆ. ಮೃತನನ್ನು ಮೌಲಾನಾ ಸಲ್ಮಾನ್ ಅಜರ್ ಎಂದು ಗುರುತಿಸಲಾಗಿದೆ. ಪಾಕಿಸ್ತಾನಿ ಅಧಿಕಾರಿಗಳಿಂದ ಇದುವರೆಗೆ ಯಾವುದೇ ಅಧಿಕೃತ ದೃಢೀಕರಣ ಬಂದಿಲ್ಲ. ಮೌಲಾನಾ ಸಲ್ಮಾನ್ ಅಜರ್ ಗುಂಪಿನ ನಾಯಕತ್ವದೊಂದಿಗೆ ನಿಕಟ ಸಂಬಂಧ ಹೊಂದಿದ್ದ ಮತ್ತು ಅದರ ಕಾರ್ಯಾಚರಣೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎಂದು ಹೇಳಲಾಗಿದೆ.

ಕಳೆದ ವರ್ಷ ಜೂನ್‌ನಲ್ಲಿ ಇದೇ ರೀತಿಯ ಘಟನೆಯಲ್ಲಿ, ಜೈಶ್-ಎ-ಮೊಹಮ್ಮದ್ (ಜೆಇಎಂ) ನ ಮತ್ತೊಬ್ಬ ಉನ್ನತ ಕಮಾಂಡರ್ ಮೌಲಾನಾ ಅಬ್ದುಲ್ ಅಜೀಜ್ ಎಸಾರ್ ಪಾಕಿಸ್ತಾನದ ಪಂಜಾಬ್ ಜಿಲ್ಲೆಯಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದ. ಎಸಾರ್ ಸಾವಿನ ವೀಡಿಯೊ ಹಲವಾರು ವಿದೇಶಿ ಮಾಧ್ಯಮಗಳಲ್ಲಿಯೂ ಪ್ರಕಟವಾಗಿತ್ತು. ಆತ ಭಾರತದಲ್ಲಿ ನಡೆದ ಅನೇಕ ಪ್ರಮುಖ ಭಯೋತ್ಪಾದಕ ದಾಳಿಗಳ ಮಾಸ್ಟರ್ ಮೈಂಡ್ ಆಗಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular