ಬೆಂಗಳೂರು : ಸೆ.15 ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ 7 ಜಿಲ್ಲೆಗಳಲ್ಲಿ ಒಂದು ವಾರ ಕಾಲ ಧಾರಾಕಾರ ಮಳೆ ಸುರಿಯಲಿದೆ . ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಬೀದರ್, ಕಲಬುರಗಿ ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ.
ಬರದ ಬೇಗೆಯಲ್ಲಿ ಸಂಕಷ್ಟಕ್ಕೀಡಾಗಿದ್ದ ರಾಜ್ಯದ ಜನರಿಗೆ ರಿಲೀಫ್ ಸಿಕ್ಕಿದೆ. ಸೆಪ್ಟೆಂಬರ್ 8 ರಿಂದ ಸೆಪ್ಟೆಂಬರ್ 15ರ ತನಕ ರಾಜ್ಯದಲ್ಲಿ ಮಳೆ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ರಾಜ್ಯದಲ್ಲಿ ತಂಪಾದ ವಾತಾವರಣ ಮುಂದುವರೆಯಲ್ಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, , ತುಮಕೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಕೂಡ ಮಳೆಯಾಗಲಿದೆ.
https://twitter.com/KarnatakaSNDMC/status/1699675888298717651?ref_src=twsrc%5Etfw%7Ctwcamp%5Etweetembed%7Ctwterm%5E1699675888298717651%7Ctwgr%5Eb7a041c37721b4a8cd24d998c96a585e1438804f%7Ctwcon%5Es1_&ref_url=https%3A%2F%2Fkannada.oneindia.com%2Fnews%2Fkarnataka%2Fimd-issues-yellow-alert-to-these-districts-karnataka-for-next-several-days-313683.html