BIG NEWS : ರಾಜ್ಯದಲ್ಲಿ ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಟಫ್ ರೂಲ್ಸ್ : ಶುಕ್ರವಾರ ಆರೋಗ್ಯ ಇಲಾಖೆಯ ಮತ್ತೊಂದು ಮಹತ್ವದ ಸಭೆ ನಿಗದಿ

ಬೆಂಗಳೂರು : ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಟಫ್ ರೂಲ್ಸ್ ಜಾರಿಯಾಗುವ ಸಾಧ್ಯತೆಯಿದ್ದು, ಶುಕ್ರವಾರ ರಾಜ್ಯ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಸಭೆ ನಡೆಸಲಿದೆ ಎಂದು ಹೇಳಲಾಗಿದೆ.

ರಾಜ್ಯದಲ್ಲಿ ಕೊರೊನಾ ಭೀತಿ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ಆರೋಗ್ಯ ಇಲಾಖೆ ಕೆಲವೊಂದು ಮಾರ್ಗಸೂಚಿಗಳನ್ನು ಹೊರಡಿಸಿದೆ. ಅಂತೆಯೇ ಶುಕ್ರವಾರ ಮತ್ತೊಂದು ಮಹತ್ವದ ಸಭೆ ನಡೆಸಲಿರುವ ರಾಜ್ಯ ಆರೋಗ್ಯ ಇಲಾಖೆ ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಟಫ್ ರೂಲ್ಸ್ ಜಾರಿಗೆ ತರುವ ಸಾಧ್ಯೆತೆಯಿದೆ. ಇಂದು ಮಂಡ್ಯ ಜಿಲ್ಲೆಯ ಮದ್ದೂರು ಹಾಗೂ ರಾಮನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕು ಧೃಡವಾಗಿದೆ. ಆದರೆ ಇದು ಕೊರೊನಾ ಹೊಸ ತಳಿಯ ಪ್ರಭೇದ ಅಲ್ಲ, ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಹೇಳಿದೆ.

ವಿದೇಶ ಪ್ರಯಾಣದ ವೇಳೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಕೊರೊನಾ ತಡೆ ನಿಟ್ಟಿನ ಹೋರಾಟದಲ್ಲಿ ನಾಗರಿಕರು ಕೈಜೋಡಿಸಬೇಕಿದೆ. ತಮಿಳುನಾಡು, ಕೇರಳದಲ್ಲಿ ಕೋವಿಡ್ 19 – ಉಪತಳಿ ಜೆಎನ್ 1 ಪ್ರಕರಣಗಳು ಪತ್ತೆಯಾಗಿರುವುದರಿಂದ ಜನಸಂದಣಿ ಇರುವೆಡೆ ಮಾಸ್ಕ್ ಧರಿಸಿ ಓಡಾಡುವುದು ಸೂಕ್ತವಾಗಿದೆ ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಕೇರಳ ಹಾಗೂ ತಮಿಳುನಾಡಿನಲ್ಲಿ ಕೋವಿಡ್ 19ರ ಉಪತಳಿ ಜೆಎನ್ 1 ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆ ರಾಜ್ಯದಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಕೋರಲಾಗಿದೆ. 60 ವರ್ಷಕ್ಕಿಂತ ಮೇಲ್ಪಟ್ಟವರು, ಗರ್ಭಿಣಿಯರು ಹಾಗೂ ಇತರ ರೋಗಗಳಿಂದ ಬಳಲುತ್ತಿರುವವರು ಮುಂಜಾಗ್ರತೆಯ ಕ್ರಮವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವಾಗ ಮಾಸ್ಕ್ ಧರಿಸುವುದು ಸೂಕ್ತ. ಚಳಿಗಾಲದ ಹವಾಮಾನ, ಕ್ರಿಸ್ಮಸ್, ಹೊಸವರ್ಷಾಚರಣೆ ಹಿನ್ನೆಲೆ ಸಂಭವನೀಯ ಜನದಟ್ಟಣೆ ಪ್ರದೇಶಗಳಿಗೆ ಭೇಟಿ ನೀಡದಿರುವುದು ಸೂಕ್ತವಾಗಿದೆ ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read