HomeKarnataka'ಪ್ರವಾಸೋದ್ಯಮ ಇಲಾಖೆ'ಯಿಂದ 'ಫೋಟೋ ಕಾಂಟೆಸ್ಟ್ 2025' ಸ್ಪರ್ಧೆ ಆಯೋಜನೆ, ನೀವು ಭಾಗವಹಿಸಿ

‘ಪ್ರವಾಸೋದ್ಯಮ ಇಲಾಖೆ’ಯಿಂದ ‘ಫೋಟೋ ಕಾಂಟೆಸ್ಟ್ 2025’ ಸ್ಪರ್ಧೆ ಆಯೋಜನೆ, ನೀವು ಭಾಗವಹಿಸಿ

ಬಳ್ಳಾರಿ :   ಪ್ರವಾಸೋದ್ಯಮ ಇಲಾಖೆ ವತಿಯಿಂದ ‘ಡಿಸ್ಕವರ್ ದಿ ಬ್ಯೂಟಿ ಆಫ್ ಇಂಡಿಯಾ’ ಶೀರ್ಷಿಕೆಯಡಿ ‘ದೆಖೋ ಅಪ್ನ ದೇಶ್ ಫೋಟೋ ಕಾಂಟೆಸ್ಟ್-2025’ ಸ್ಪರ್ಧೆ ಏರ್ಪಡಿಸಲಾಗಿದ್ದು, ಬಳ್ಳಾರಿ ಜಿಲ್ಲೆಯ ಪ್ರಮುಖ ಧಾರ್ಮಿಕ, ಸಾಂಸ್ಕೃತಿಕ, ಪಾರಂಪರಿಕ, ಕರಕುಶಲ, ನೈಸರ್ಗಿಕ ಹಾಗೂ ವನ್ಯಜೀವಿ ಮತ್ತು ಸಾಹಸ ಚಟುವಟಿಕೆಗಳು ಹಾಗೂ ಇತರೆ ಪ್ರವಾಸಿತಾಣಗಳ ಅತ್ಯಾಕರ್ಷಕ ಛಾಯಾಚಿತ್ರಗಳನ್ನು ಸೆರೆಹಿಡಿದು ಪ್ರವಾಸಿ ತಾಣಗಳ ಕಿರು ವಿವರಣೆಯೊಂದಿಗೆ [email protected] ಇ-ಮೇಲ್ ಗೆ ನೇರವಾಗಿ ಕಳುಹಿಸಿಕೊಡಬಹುದಾಗಿದೆ.

ಪ್ರವಾಸೋದ್ಯಮವನ್ನು ಇನ್ನಷ್ಟು ಮೇಲ್ದರ್ಜೆಗೇರಿಸಲು ಹಾಗೂ ಎಲ್ಲಾ ವರ್ಗಗಳ ಧಾರ್ಮಿಕ, ಸಾಂಸ್ಕೃತಿಕ, ಪಾರಂಪರಿಕ, ಕರಕುಶಲ, ನೈಸರ್ಗಿಕ ಹಾಗೂ ವನ್ಯಜೀವಿ ಮತ್ತು ಸಾಹಸ ಚಟುವಟಿಕೆಗಳು ಹಾಗೂ ಇತರೆ ಪ್ರವಾಸಿತಾಣಗಳಲ್ಲಿ ಪ್ರವಾಸಿಗರ ದೃಷ್ಟಿಕೋನದಲ್ಲಿ ಪ್ರಮುಖ ಪ್ರವಾಸಿತಾಣಗಳನ್ನು ಗುರುತಿಸಿ, ವಿಶ್ವದರ್ಜೆಯಲ್ಲಿ ಅಭಿವೃದ್ಧಿಪಡಿಸಲು ಕೇಂದ್ರ ಪ್ರವಾಸೋದ್ಯಮದಿಂದ ‘ಡಿಸ್ಕವರ್ ದಿ ಬ್ಯೂಟಿ ಆಫ್ ಇಂಡಿಯಾ’ ಶೀರ್ಷಿಕೆಯಡಿ ‘ದೆಖೋ ಅಪ್ನ ದೇಶ್ ಫೋಟೋ ಕಾಂಟೆಸ್ಟ್-2025’ ಸ್ಪರ್ಧೆ ಏರ್ಪಡಿಸಲಾಗಿದ್ದು, ಈ ಸಂಬAಧ ರಾಜ್ಯದ ಎಲ್ಲಾ ಜಿಲ್ಲೆಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿನ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಛಾಯಾಚಿತ್ರಗಳನ್ನು ಸೆರೆಹಿಡಿದು ಇ-ಮೇಲ್ ಗೆ ನೇರವಾಗಿ ಕಳುಹಿಸಲು ಏ.07 ರ ವರೆಗೆ ಅವಕಾಶ ಕಲ್ಪಿಸಲಾಗಿದೆ.

*ವರ್ಗ:*

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಮಾರಕ, ವನ್ಯಜೀವಿ, ಜಿಐ ಟ್ಯಾಗ್ ಕರಕುಶಲ ವಸ್ತುಗಳು ಮತ್ತು ಕೈಮಗ್ಗಗಳು, ಭೂದೃಶ್ಯ(ಲ್ಯಾಂಡ್ ಸ್ಕೇಪ್) ಮತ್ತು ಸಾಹಸ. ಈ ವರ್ಗಗಳಡಿ ಫೋಟೋ ಕಳುಹಿಸಿಕೊಡಬಹುದಾಗಿದೆ.

ಬಳ್ಳಾರಿ ಜಿಲ್ಲೆಯ ಪ್ರವಾಸಿತಾಣಗಳಿಗೆ ರಾಷ್ಟ್ರೀಯ ಮತ್ತು ಅಂತರಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಪ್ರಚಾರವನ್ನು ನೀಡಲು ಜಿಲ್ಲೆಯ ಎಲ್ಲಾ ಛಾಯಾಗ್ರಾಹಕರು, ಸಾರ್ವಜನಿಕರು ಹಾಗೂ ಪ್ರವಾಸಿಗರು ಸಹಕರಿಸುವಂತೆ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಪ್ರಭುಲಿಂಗ ತಳಕೇರಿ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular