HomeKarnatakaಹೂಡಿಕೆ, ಉದ್ಯೋಗ, ಪರಿಸರ ಸಂರಕ್ಷಣೆ ಸೇರಿ ಕರಾವಳಿ-ಮಲೆನಾಡು ಪ್ರವಾಸೋದ್ಯಮ ಅಭಿವೃದ್ಧಿಗೆ ಮಹತ್ವದ ಕ್ರಮ

ಹೂಡಿಕೆ, ಉದ್ಯೋಗ, ಪರಿಸರ ಸಂರಕ್ಷಣೆ ಸೇರಿ ಕರಾವಳಿ-ಮಲೆನಾಡು ಪ್ರವಾಸೋದ್ಯಮ ಅಭಿವೃದ್ಧಿಗೆ ಮಹತ್ವದ ಕ್ರಮ

ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಭಾಗಗಳ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಮರ್ಪಕವಾಗಿ ಬಳಸಿಕೊಂಡು, ಸುಸ್ಥಿರ ಪ್ರವಾಸೋದ್ಯಮ ಅಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ‘ಕರಾವಳಿ–ಮಲೆನಾಡು ಪ್ರವಾಸೋದ್ಯಮ ಅಭಿವೃದ್ಧಿ ನೀತಿ’ ಕುರಿತಂತೆ ಮಹತ್ವದ ಸಭೆ ನಡೆಸಿ ಚರ್ಚಿಸಲಾಗಿದೆ.

ಪ್ರವಾಸೋದ್ಯಮ ಮೂಲಸೌಕರ್ಯಗಳ ಅಭಿವೃದ್ಧಿ, ಪ್ರವಾಸಿ ತಾಣಗಳಿಗೆ ಉತ್ತಮ ಸಂಪರ್ಕ ವ್ಯವಸ್ಥೆ, ಹೂಡಿಕೆ ಆಕರ್ಷಣೆ, ಸ್ಥಳೀಯರಿಗೆ ಉದ್ಯೋಗಾವಕಾಶ ಸೃಷ್ಟಿ ಹಾಗೂ ಪರಿಸರ ಸಂರಕ್ಷಣೆಯೊಂದಿಗೆ ಪ್ರವಾಸೋದ್ಯಮವನ್ನು ವಿಸ್ತರಿಸುವ ಕುರಿತು ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಲಾಯಿತು.

ಸಂಬಂಧಪಟ್ಟ ಇಲಾಖೆಗಳ ನಡುವೆ ಪರಿಣಾಮಕಾರಿ ಸಮನ್ವಯ ಸಾಧಿಸಿ, ಕರಾವಳಿ ಮತ್ತು ಮಲೆನಾಡು ಪ್ರದೇಶಗಳನ್ನು ಪ್ರಮುಖ ಪ್ರವಾಸೋದ್ಯಮ ತಾಣಗಳಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಅಭಿಪ್ರಾಯ ವಿನಿಮಯ ಮಾಡಿಕೊಳ್ಳಲಾಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ ಜಾರ್ಜ್‌, ಕೃಷಿ ಸಚಿವ ನರೇಂದ್ರ ಸ್ವಾಮಿ, ಶಾಸಕ ಅಶೋಕ್ ರೈ, ಮುಖ್ಯಮಂತ್ರಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್‌ ಗಿರಿನಾಥ್‌, ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ/ಆಯುಕ್ತರಾದ ರಾಮ್‌ ಪ್ರಸಾತ್‌ ಮನೋಹರ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸ್ತ್ರೀ ಶಕ್ತಿ ಒಕ್ಕೂಟ/ ಸ್ವಯಂ ಸೇವಾ ಸಂಸ್ಥೆಗಳಿಂದ ಶಿಶುಪಾಲನಾ ಕೇಂದ್ರಗಳ ತೆರೆದು ನಿರ್ವಹಣೆ ಮಾಡಲು ಅರ್ಜಿ ಆಹ್ವಾನ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಬೆಂಗಳೂರು ನಗರ ಜಿಲ್ಲೆಯಲ್ಲಿ 03 ಜಿಲ್ಲಾ ಮಟ್ಟದಲ್ಲಿ ಶಿಶುಪಾಲನಾ ಕೇಂದ್ರಗಳನ್ನು ತೆರೆದು ನಿರ್ವಹಣೆ ಮಾಡಲು ಸ್ತ್ತೀಶಕ್ತಿ ಒಕ್ಕೂಟ/ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳೊಂದಿಗೆ  ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ.ಎಂ.ಎಚ್. ಮರಿಗೌಡ ರಸ್ತೆ, ಬೆಂಗಳೂರು ಇಲ್ಲಿ ಸೆಪ್ಟೆಂಬರ್ 15 2026 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಚೇರಿ, ಬೆಂಗಳೂರು ನಗರ ಜಿಲ್ಲೆ ಅಥವಾ ದೂರವಾಣಿ ಸಂಖ್ಯೆ 080-29578688 ಅನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂಗನವಾಡಿ ಕೇಂದ್ರಗಳಿಗೆ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ, ಬೆಂಗಳೂರು ರಾಜ್ಯ ಯೋಜನೆ ವ್ಯಾಪ್ತಿಯಲ್ಲಿರುವ 17 ಅಂಗನವಾಡಿ ಕಂ ಕ್ರೀಚ್ ಕೇಂದ್ರಗಳಿಗೆ 17 ಕಾರ್ಯಕರ್ತೆಯರು ಹಾಗೂ 17 ಸಹಾಯಕಿಯರನ್ನು ಗೌರವಧನ ಆಧಾರಿತ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸೆಪ್ಟೆಂಬರ್ 22, 2026ರ ಸಂಜೆ 5.30 ಗಂಟೆಯೊಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಬೆಂಗಳೂರು ರಾಜ್ಯ ಯೋಜನೆ, ಬಿಬಿಎಂಪಿ ಕಟ್ಟಡ, ಮೊದಲನೇ ಮಹಡಿ, ಎನ್.ಆರ್. ಕಾಲೋನಿ, ಬೆಂಗಳೂರು-19 ಇಲ್ಲಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 080-26601917 ಅಥವಾ ಇ-ಮೇಲ್: [email protected]  ಅನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು  ಪ್ರಕಟಣೆಯಲ್ಲಿ ತಿಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular