HomeKarnatakaಮತ್ತೊಂದು ಅವಘಡ: ಸೆಲ್ಫಿ ತೆಗೆದುಕೊಳ್ಳಲು ಹೋದ ಪ್ರವಾಸಿಗ ನೀರಿಗೆ ಬಿದ್ದು 'ನಾಪತ್ತೆ'

ಮತ್ತೊಂದು ಅವಘಡ: ಸೆಲ್ಫಿ ತೆಗೆದುಕೊಳ್ಳಲು ಹೋದ ಪ್ರವಾಸಿಗ ನೀರಿಗೆ ಬಿದ್ದು ‘ನಾಪತ್ತೆ’

ಕುಶಾಲನಗರ: ಸೆಲ್ಫಿ ತೆಗೆಯುವ ವೇಳೆ ನೀರಿಗೆ ಬಿದ್ದ ಪ್ರವಾಸಿಗ ನಾಪತ್ತೆ

ಇತ್ತೀಚೆಗಷ್ಟೇ ಯುವಕನೊಬ್ಬ ಜಲಪಾತದ ಮುಂಭಾಗದಲ್ಲಿ ನಿಂತು ಫೋಟೋ ತೆಗೆಸಿಕೊಳ್ಳಲು ಹೋದ ವೇಳೆ ಜಾರಿ ಬಿದ್ದು, ನಾಪತ್ತೆಯಾಗಿದ್ದ ಪ್ರಕರಣ ನಡೆದಿತ್ತು. ನಾಲ್ಕೈದು ದಿನಗಳ ಬಳಿಕ ಈ ಯುವಕನ ಶವ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಇದೀಗ ಕೊಡಗು ಜಿಲ್ಲೆಯ ಹಾರಂಗಿ ಜಲಾಶಯದ ಬಳಿ ಮತ್ತೊಂದು ಅವಘಡ ನಡೆದಿದ್ದು, ಗುರುವಾರ ಸಂಜೆ ಸೆಲ್ಫಿ ತೆಗೆದುಕೊಳ್ಳಲು ಹೋದ ಬೆಂಗಳೂರಿನ ವಿದ್ಯಾರಣ್ಯಪುರಂ ನಿವಾಸಿ 46 ವರ್ಷದ ಸಂದೀಪ ಕಾಲು ಜಾರಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾರೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಟ್ಯಾಟೂ ಕಲಾವಿದರಾಗಿದ್ದ ಇವರು ಸಾಕು ನಾಯಿಗಳ ಮಾರಾಟವನ್ನೂ ಮಾಡುತ್ತಿದ್ದರು ಎಂದು ತಿಳಿದು ಬಂದಿದ್ದು, ಜಲಾಶಯದ ಕೆಳಭಾಗದ ಸೇತುವೆ ಮೇಲೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾರೆ. ಅಗ್ನಿಶಾಮಕ ತುರ್ತು ಸೇವೆಗಳ ಇಲಾಖೆ ಸಿಬ್ಬಂದಿ ಇವರಿಗಾಗಿ ಹುಡುಕಾಟ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular