HomeLatest NewsBreaking News: ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ನಿರ್ಬಂಧ

Breaking News: ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ನಿರ್ಬಂಧ

ಹೊಸ ವರ್ಷದ ಆಚರಣೆ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ ಕೆಲವು ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡದಂತೆ ನಿರ್ಬಂಧಿಸಲಾಗಿದೆ. ದಿನಾಂಕ 31.12.2025ರ ಸಂಜೆ 6 ಗಂಟೆಯಿಂದ ದಿನಾಂಕ 01.01.2026 ರ ಬೆಳಿಗ್ಗೆ 6 ಗಂಟೆಯವರೆಗೆ ತಾತ್ಕಾಲಿಕವಾಗಿ ಪ್ರವಾಸಿಗರ ಭೇಟಿ ನಿಷೇಧಿಸಲಾಗಿದೆ.

ಈ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಚಿಕ್ಕಮಗಳೂರು ಜಿಲ್ಲೆ ಆದೇಶವನ್ನು ಹೊರಡಿಸಿದೆ. ಈ ಆದೇಶವು 2026ನೇ ಸಾಲಿನ ಹೊಸ ವರ್ಷದ ಆಚರಣೆ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ ಕೆಲವು ಪ್ರವಾಸಿ ತಾಣಗಳಿಗೆ ಪ್ರವಾಸಿಗರು ದಿನಾಂಕ 31-12-2025 ರ ಸಂಜೆ 6.00 ಗಂಟೆಯಿಂದ ದಿನಾಂಕ: 01-01-2026ರ ಬೆಳಿಗ್ಗೆ 6.00 ಗಂಟೆಯವರೆಗೆ ಭೇಟಿ ನೀಡುವುದನ್ನು ತಾತ್ಕಾಲಿಕವಾಗಿ ನಿಷೇಧಿಸುವ ಕುರಿತು ಎಂಬ ವಿಷಯವನ್ನು ಒಳಗೊಂಡಿದೆ.

ದಿನಾಂಕ 31-12-2025 ರ ಸಂಜೆ 6.00 ಗಂಟೆಯಿಂದ ದಿನಾಂಕ: 01-01-2026 ರ ಬೆಳಿಗ್ಗೆ 6.00 ಗಂಟೆಯವರೆಗೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸಾರ್ವಜನಿಕರು/ ನಾಗರಿಕರು 2026ನೇ ಸಾಲಿನ ಹೊಸ ವರ್ಷಾಚರಣೆಯನ್ನು ಮಾಡಲಿದ್ದು, ಈ ಸಮಯದಲ್ಲಿ ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಲಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಈಗಾಗಲೇ ಆನ್ ಲೈನ್ ಮುಖಾಂತರ ನಿಷೇಧಿಸುವ ಸ್ಥಳಗಳ ಮಾರ್ಗದಲ್ಲಿ ಇರುವ ಹೋಂ ಸ್ಟೇ, ರೆಸಾರ್ಟ್‌ಗಳನ್ನು ಕಾಯ್ದಿರಿಸಿದ ಪ್ರವಾಸಿಗರಿಗೆ ಸಂಬಂಧಪಟ್ಟ ಹೋಂ ಮತ್ತು ರೆಸಾರ್ಟ್‌ಗೆ ಹೋಗಲು ಹೊರತುಪಡಿಸಿ ಇತರೆ ಪ್ರವಾಸಿಗರನ್ನು ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧಿಸಲಾಗಿದೆ.

ಚಿಕ್ಕಮಗಳೂರು ತಾಲ್ಲೂಕು ವ್ಯಾಪ್ತಿಯ ಜಾವರಿನ್ ಚೆಕ್ ಪೋಸ್ಟ್ ನಿಂದ ಮೇಲ್ಬಾಗಕ್ಕೆ ಹೋಗುವ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರಾ, ಝರಿ ಫಾಲ್ಸ್, ಹೊನ್ನಮ್ಮನಹಳ್ಳ, ಗಾಳಿಕೆರೆ ಹಾಗೂ ಹಿರೇಕೊಳಲೆ ಕೆರೆ, ಕಾಮೇನಹಳ್ಳಿ ಗ್ರಾಮದಲ್ಲಿರುವ ಡೈಮಂಡ್ ಫಾಲ್ಸ್, ಮೂಡಿಗೆರೆ ತಾಲ್ಲೂಕು ವ್ಯಾಪ್ತಿಯ ಎತ್ತಿನಭುಜ, ದೇವರಮನೆ, ರಾಣಿಝರಿ, ಬಲ್ಲಾಳರಾಯನ ದುರ್ಗ, ಬಂಡಾಜೆ ಫಾಲ್ಸ್, ಕುಡಿಗೆ ಫಾಲ್ಸ್, ಕಳಸ ತಾಲ್ಲೂಕು ವ್ಯಾಪ್ತಿಯ ಕ್ಯಾತನಮಕ್ಕಿ, ರುದ್ರಪಾದ, ತೂಗು ಸೇತುವೆ ಮತ್ತು ಅಬ್ಬುಗುಡಿಗೆ ಫಾಲ್ಸ್ ಗಳಿಗೆ ಹೋಗುವಂತಿಲ್ಲ.

ಕಡೂರು ತಾಲ್ಲೂಕು ವ್ಯಾಪ್ತಿಯ ಅಯ್ಯನಕೆರೆ, ಮದಗದಕೆರೆ, ತರೀಕೆರೆ ತಾಲ್ಲೂಕು ವ್ಯಾಪ್ತಿಯ ಕೆಮ್ಮಣ್ಣುಗುಂಡಿ, ಕಲ್ಲತ್ತಿಗಿರಿ, ಹೆಬ್ಬೆ ಫಾಲ್ಸ್, ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡುವುದನ್ನು ತಾತ್ಕಾಲಿಕವಾಗಿ ನಿಷೇಧಿಸಿ ಆದೇಶ ಹೊರಡಿಸಲು ಪೊಲೀಸ್ ಅಧೀಕ್ಷಕರು, ಚಿಕ್ಕಮಗಳೂರು ಜಿಲ್ಲೆ ಕೋರಿದ್ದರು.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳನ್ನು ಪರಿಗಣಿಸಿ, ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇಲ್ಕಂಡಂತೆ ಪ್ರವಾಸಿ ತಾಣಗಳಿಗೆ ಪವಾಸಿಗರು ಭೇಟಿ ನೀಡುವುದನ್ನು ತಾತ್ಕಾಲಿಕವಾಗಿ ನಿಷೇಧಿಸುವುದು ಸೂಕ್ತವೆಂದು ಮನಗಂಡು ಈ ಕೆಳಕಂಡಂತೆ ಆದೇಶ ಹೊರಡಿಸಲಾಗಿರುತ್ತದೆ.

ಆದೇಶದ ವಿವರ:  ಮೀನಾ ನಾಗರಾಜ್ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ, ಚಿಕ್ಕಮಗಳೂರು ಜಿಲ್ಲೆ ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಅನುಸಾರ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 31(b) ಮತ್ತು (n) ರಡಿಯಲ್ಲಿ ದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ, ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರಾ, ಝರಿ ಫಾಲ್ಸ್, ಹೊನ್ನಮ್ಮನಹಳ್ಳ, ಗಾಳಿಕೆರೆ, ಹಿರೇಕೊಳಲೆ ಕೆರೆ, ಡೈಮಂಡ್ ಫಾಲ್ಸ್, ಎತ್ತಿನಭುಜ, ದೇವರಮನೆ, ರಾಣಿಝರಿ, ಬಲ್ಲಾಳರಾಯನ ದುರ್ಗ, ಬಂಡಾಜೆ ಫಾಲ್ಸ್, ಕುಡಿಗೆ ಫಾಲ್ಸ್, ಕ್ಯಾತನಮಕ್ಕಿ, ರುದ್ರಪಾದ, ತೂಗು ಸೇತುವೆ, ಅಬ್ಬುಗುಡಿಗೆ ಫಾಲ್ಸ್, ಅಯ್ಯನಕೆರೆ, ಮದಗದ ಕೆರೆ, ಕೆಮ್ಮಣ್ಣುಗುಂಡಿ, ಕಲ್ಲತ್ತಗಿರಿ ಹಾಗೂ ಹಬ್ಬೆ ಫಾಲ್ಸ್‌ ಪ್ರವಾಣಿ ತಾಣಗಳಿಗೆ ಪ್ರವಾಸಿಗರ ಭೇಟಿ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular