HomeKarnatakaಪ್ರವಾಸಿಗರಿಗೆ ಮುಖ್ಯ ಮಾಹಿತಿ: ಮಾ. 15ರಿಂದ 3 ದಿನ ಮುಳ್ಳಯ್ಯನಗಿರಿ, ಬಾಬಾಬುಡನ್ ಗಿರಿಗೆ ಪ್ರವೇಶ ನಿರ್ಬಂಧ

ಪ್ರವಾಸಿಗರಿಗೆ ಮುಖ್ಯ ಮಾಹಿತಿ: ಮಾ. 15ರಿಂದ 3 ದಿನ ಮುಳ್ಳಯ್ಯನಗಿರಿ, ಬಾಬಾಬುಡನ್ ಗಿರಿಗೆ ಪ್ರವೇಶ ನಿರ್ಬಂಧ

ಚಿಕ್ಕಮಗಳೂರು: ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಬಾಬಾಬುಡನ್ ಗಿರಿ, ಗಾಳಿಕೆರೆ, ಮಾಣಿಕ್ಯಧಾರ ತಾಣಗಳಿಗೆ ಮಾರ್ಚ್ 15 ರಿಂದ 17ರ ವರೆಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಚಿಕ್ಕಮಗಳೂರು ತಾಲೂಕಿನ ಐ.ಡಿ. ಪೀಠ, ಶ್ರೀ ಗುರು ದತ್ತಾತ್ರೇಯ ಬಾಬಬುಡನ್ ಸ್ವಾಮಿ ದರ್ಗಾ ಸಂಸ್ಥೆಯಲ್ಲಿ ಮಾರ್ಚ್ 15 ರಿಂದ 17ರ ವರೆಗೆ ಉರುಸ್ ಕಾರ್ಯ ಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸಾವಿರಾರು ಭಕ್ತಾದಿಗಳು ವಾಹನಗಳ ಮೂಲಕ ಆಗಮಿಸಲಿದ್ದಾರೆ. ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಸಂಸ್ಥೆಗೆ ತೆರಳುವ ರಸ್ತೆ ತುಂಬಾ ಕಿರಿದಾಗಿದ್ದು, ಕಳೆದ ವರ್ಷ ಭಾರಿ ಮಳೆಯಿಂದ ಹಾಳಾಗಿದೆ. ಆದ ಕಾರಣ ಹೆಚ್ಚಿನ ಜನಸಂದಣಿಯಿಂದಾಗಿ ಅನಾನುಕೂಲವಾಗುವುದನ್ನು ತಪ್ಪಿಸಲು ಪ್ರವಾಸಿಗರಿಗೆ ಪ್ರವಾಸ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular