HomeLatest NewsBIG NEWS : ಪ್ರವಾಸಿಗರೇ ಗಮನಿಸಿ : ಹೊಸ ವರ್ಷಾಚರಣೆ ಹಿನ್ನೆಲೆ ರಾಜ್ಯದ ಈ ಪ್ರವಾಸಿ...

BIG NEWS : ಪ್ರವಾಸಿಗರೇ ಗಮನಿಸಿ : ಹೊಸ ವರ್ಷಾಚರಣೆ ಹಿನ್ನೆಲೆ ರಾಜ್ಯದ ಈ ಪ್ರವಾಸಿ ತಾಣಗಳಿಗೆ ಇಂದು ಪ್ರವೇಶ ನಿರ್ಬಂಧ

ಬೆಂಗಳೂರು : ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಈಗಾಗಲೇ ಪೊಲೀಸರು, ಜಿಲ್ಲಾಡಳಿತ ಕೈಗೊಂಡಿದೆ. ಹಲವು ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

* ಮಂಡ್ಯದ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ
ಹೊಸ ವರ್ಷಾಚರಣೆಯ ಸಂಬಂಧ ಮಂಡ್ಯ ಜಿಲ್ಲಾ ಪೊಲೀಸರು ಕೆ.ಆರ್.ಎಸ್ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಪ್ರವೇಶ ನಿರ್ಬಂಧಿಸಿ ಆದೇಶವನ್ನು ಹೊರಡಿಸಿದ್ದಾರೆ. ಡಿಸೆಂಬರ್ 31ರ ಬೆಳಗ್ಗೆ 6 ಗಂಟೆಯಿಂದ ಜನವರಿ 1 ರಾತ್ರಿ 8 ಗಂಟೆಯ ತನಕ ಈ ಆದೇಶ ಜಾರಿಯಲ್ಲಿರುತ್ತದೆ.

ಹೊಸ ವರ್ಷದ ಪ್ರಯುಕ್ತ ಬಲಮುರಿ, ಎಡಮುರಿ ವೇಣುಗೋಪಾಲಸ್ವಾಮಿ ದೇವಾಲಯ, ಚಿಕ್ಕಯಾರಹಳ್ಳಿ ಬಳಿಯ ಕೊಳಬಾವಿ ಪ್ರವೇಶ, ಕೆ.ಆರ್.ಸಾಗರ ಅಣೆಕಟ್ಟು, ಕಾವೇರಿ ಹಿನ್ನೀರು ಮತ್ತು ನದಿ ಪಾತ್ರದ ಸುತ್ತಮುತ್ತಲಿನ ಪ್ರದೇಶಗಳಿಗೆ ಪ್ರವೇಶವಿಲ್ಲ.ಡಿಸೆಂಬರ್ 31ರ ಬೆಳಗ್ಗೆ 6 ಗಂಟೆಯಿಂದ 2026ರ ಜನವರಿ 1ರ ರಾತ್ರಿ 8 ಗಂಟೆಯ ತನಕ ವರ್ಷಾಚರಣೆ ಮತ್ತು ಮೋಜು ಮಸ್ತಿ ಮಾಡದಂತೆ ಬಿ.ಎನ್.ಎಸ್.ಎಸ್ ಕಲಂ 163ರ ಅನ್ವಯ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

* ನಂದಿಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ
ಡಿ.31 ರ ಮಧ್ಯಾಹ್ನ 2 ರಿಂದ ಜನವರಿ 1 ರ ಬೆಳಗ್ಗೆ 10 ಗಂಟೆವರೆಗೆ ನಂದಿಗಿರಿಧಾಮ ಪ್ರವಾಸಿ ತಾಣ ಬಂದ್ ಆಗಿದೆ. ಅತಿಥಿ ಗೃಹ ಬುಕ್ ಮಾಡಿದವರನ್ನು ಹೊರತುಪಡಿಸಿ ಉಳಿದವರಿಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶ ಹೊರಡಿಸಿದ್ದಾರೆ. .ಯಾವುದೇ ಅಹಿತಕರ ಘಟನೆ ನಡೆಯದಂತೆ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಡಿಸೆಂಬರ್ 31ರ ಮಧ್ಯಾಹ್ನ 2 ಗಂಟೆಯಿಂದ 2026 ಜನವರಿ 1 ರಂದು 10 ಗಂಟೆವರೆಗೂ ಸಾರ್ವಜನಿಕರು ಹಾಗೂ ಪ್ರವಾಸಿಗರ ಪ್ರವೇಶ ನಿರ್ಬಂಧ ಮಾಡಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಎನ್ ರವಿಂದ್ರ ಆದೇಶ ಹೊರಡಿಸಿದ್ದಾರೆ.

* ಚಿಕ್ಕಮಗಳೂರಿನ ಪ್ರವಾಸಿ ತಾಣಗಳು ಬಂದ್
ಹೊಸ ವರ್ಷದ ಆಚರಣೆ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ ಕೆಲವು ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡದಂತೆ ನಿರ್ಬಂಧಿಸಲಾಗಿದೆ. ದಿನಾಂಕ 31.12.2025ರ ಸಂಜೆ 6 ಗಂಟೆಯಿಂದ ದಿನಾಂಕ 01.01.2026 ರ ಬೆಳಿಗ್ಗೆ 6 ಗಂಟೆಯವರೆಗೆ ತಾತ್ಕಾಲಿಕವಾಗಿ ಪ್ರವಾಸಿಗರ ಭೇಟಿ ನಿಷೇಧಿಸಲಾಗಿದೆ.ಈ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಚಿಕ್ಕಮಗಳೂರು ಜಿಲ್ಲೆ ಆದೇಶವನ್ನು ಹೊರಡಿಸಿದೆ.

ಆದೇಶದ ವಿವರ: ಮೀನಾ ನಾಗರಾಜ್ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ, ಚಿಕ್ಕಮಗಳೂರು ಜಿಲ್ಲೆ ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಅನುಸಾರ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 31(b) ಮತ್ತು (n) ರಡಿಯಲ್ಲಿ ದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ, ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರಾ, ಝರಿ ಫಾಲ್ಸ್, ಹೊನ್ನಮ್ಮನಹಳ್ಳ, ಗಾಳಿಕೆರೆ, ಹಿರೇಕೊಳಲೆ ಕೆರೆ, ಡೈಮಂಡ್ ಫಾಲ್ಸ್, ಎತ್ತಿನಭುಜ, ದೇವರಮನೆ, ರಾಣಿಝರಿ, ಬಲ್ಲಾಳರಾಯನ ದುರ್ಗ, ಬಂಡಾಜೆ ಫಾಲ್ಸ್, ಕುಡಿಗೆ ಫಾಲ್ಸ್, ಕ್ಯಾತನಮಕ್ಕಿ, ರುದ್ರಪಾದ, ತೂಗು ಸೇತುವೆ, ಅಬ್ಬುಗುಡಿಗೆ ಫಾಲ್ಸ್, ಅಯ್ಯನಕೆರೆ, ಮದಗದ ಕೆರೆ, ಕೆಮ್ಮಣ್ಣುಗುಂಡಿ, ಕಲ್ಲತ್ತಗಿರಿ ಹಾಗೂ ಹಬ್ಬೆ ಫಾಲ್ಸ್ ಪ್ರವಾಣಿ ತಾಣಗಳಿಗೆ ಪ್ರವಾಸಿಗರ ಭೇಟಿ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ.

ಕಳಸ

ಕಳಸ ತಾಲ್ಲೂಕು ವ್ಯಾಪ್ತಿಯ ಕ್ಯಾತನಮಕ್ಕಿ ರುದ್ರಪಾದ, ತೂಗು ಸೇತುವೆ ಮತ್ತು ಅಬ್ಬುಗುಡಿಗೆ ಫಾಲ್ಸ್, ಕಡೂರು ತಾಲ್ಲೂಕು ವ್ಯಾಪ್ತಿಯ ಆಯ್ಯನಕೆರೆ, ಮದಗದಕೆರೆ.ತರೀಕೆರೆ ತಾಲ್ಲೂಕು ವ್ಯಾಪ್ತಿಯ ಕೆಮ್ಮಣ್ಣುಗುಂಡಿ, ಕಲ್ಲತ್ತಿರಿ. ಹೆಬ್ಬೆ ಫಾಲ್ಸ್ ಪ್ರವೇಶಕ್ಕೆ ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ ತಾತ್ಕಾಲಿಕವಾಗಿ ನಿಷೇಧಿಸಿ ಆದೇಶಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular