ಚಿಕ್ಕಬಳ್ಳಾಪುರ: ಪ್ರಸಿದ್ಧ ಪ್ರವಾಸಿ ತಾಣ ನಂದಿ ಬೆಟ್ಟಕ್ಕೆ ಆಗಸ್ಟ್ 10ರಂದು ಖಾಸಗಿ ವಾಹನಗಳು, ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ಆಗಸ್ಟ್ 10 ರಂದು ಬೆಳಿಗ್ಗೆ 4 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಖಾಸಗಿ ವಾಹನಗಳ ಸಂಚಾರ ಮತ್ತು ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಭಾಗಿತ್ವದಲ್ಲಿ ನಂದಿ ಹಿಲ್ಸ್ ಮಾನ್ಸೂನ್ ರನ್ ಕಾರ್ಯಕ್ರಮ ಆಯೋಜಿಸಿರುವ ಹಿನ್ನೆಲೆಯಲ್ಲಿ ಖಾಸಗಿ ವಾಹನಗಳ ಸಂಚಾರ ಮತ್ತು ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ರವೀಂದ್ರ ಆದೇಶ ಹೊರಡಿಸಿದ್ದಾರೆ.
ನಂದಿ ಹಿಲ್ಸ್ ಮಾನ್ಸೂನ್ ರನ್ ನಲ್ಲಿ ಸ್ಥಳೀಯರು, ಯುವ ಕ್ರೀಡಾಪಟುಗಳು ಹಾಗೂ ಪ್ರವಾಸಿಗರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಖಾಸಗಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸಾಮಾನ್ಯ ಪ್ರವಾಸಿಗರಿಗೂ ನಂದಿ ಬೆಟ್ಟಕ್ಕೆ ಪ್ರವೇಶ ನಿರಾಕರಿಸಲಾಗಿದೆ.