HomeLatest Newsಪ್ರವಾಸಿಗರೇ ಗಮನಿಸಿ: ಎರಡು ದಿನ ನಂದಿ ಗಿರಿಧಾಮಕ್ಕೆ ಸಾರ್ವಜನಿಕರಿಗೆ ಪ್ರವೇಶ ಬಂದ್

ಪ್ರವಾಸಿಗರೇ ಗಮನಿಸಿ: ಎರಡು ದಿನ ನಂದಿ ಗಿರಿಧಾಮಕ್ಕೆ ಸಾರ್ವಜನಿಕರಿಗೆ ಪ್ರವೇಶ ಬಂದ್

ಚಿಕ್ಕಬಳ್ಳಾಪುರ: ನಾಳೆ ಐತಿಹಾಸಿಕ ನಂದಿ ಗಿರಿಧಾಮದಲ್ಲಿ ಸಂಪುಟ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಎರಡು ದಿನ ಸಾರ್ವಜನಿಕರಿಗೆ ನಂದಿ ಗಿರಿಧಾಮ ಪ್ರವೇಶ ನಿರ್ಬಂಧಿಸಲಾಗಿದೆ.

ಇಂದು ಮತ್ತು ನಾಳೆ ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಮುಂಜಾಗ್ರತೆ ಕ್ರಮವಾಗಿ ಪ್ರವೇಶ ನಿರ್ಬಂಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಆದೇಶಿಸಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಾಳೆ ನಂದಿ ಗಿರಿಧಾಮದಲ್ಲಿ ಸಂಪುಟ ಸಭೆ ನಡೆಯಲಿದ್ದು, ಹಲವು ಮಹತ್ವದ ನಿರ್ಧಾರ ಕೈಗೊಳ್ಳಲಾಗುವುದು. ಸಂಪುಟ ಸದಸ್ಯರ ಆಗಮನ ಹಿನ್ನೆಲೆಯಲ್ಲಿ ನಂದಿ ಗಿರಿಧಾಮಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular