ಹಾಸನ: ಯುನೆಸ್ಕೋ ವಿಶ್ವ ಪರಂಪರೆ ತಾಣವಾದ ಬೇಲೂರಿನ ಶ್ರೀ ಚನ್ನಕೇಶವ ದೇವಾಲಯದ ಸೌಂದರ್ಯ, ಪ್ರವಾಸಿಗರ ಭದ್ರತೆ ಮತ್ತು ಸಂಸ್ಕೃತಿಕ ಶಿಸ್ತಿಗೆ ಧಕ್ಕೆಯಾಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕ/ಪ್ರವಾಸಿಗರ ಹಿತದೃಷ್ಟಿಯಿಂದ ಶ್ರೀ ಚನ್ನಕೇಶವ ದೇವಾಲಯದ ಮುಂಭಾಗ ಪ್ರವಾಸಿಗರ ಹಾಗೂ ಸಾರ್ವಜನಿಕರ ಎಲ್ಲಾ ರೀತಿಯ ವಾಹನಗಳ ನಿಲುಗಡೆಯನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ಲತಾ ಕುಮಾರಿ ಅವರು ನಿಷೇಧಿಸಿ ಆದೇಶಿಸಿರುತ್ತಾರೆ.
ಶ್ರೀ ಚನ್ನಕೇಶವ ದೇವಾಲಯಕ್ಕೆ ಭೇಟಿ ನೀಡುವ ಪ್ರವಾಸಿಗರು/ಭಕ್ತಾಧಿಗಳು ಹಾಗೂ ಸಾರ್ವಜನಿಕರ ವಾಹನಗಳನ್ನು ದೇವಾಲಯದ ಹಿಂಭಾಗ ನಿಗಧಿಪಡಿಸಿರುವ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಈ ಆದೇಶ ಉಲ್ಲಂಘಿಸಿದ ವಾಹನ ಮಾಲೀಕರಿಗೆ ರೂ.500 ಗಳ ದಂಡವನ್ನು ವಿಧಿಸಲಾಗುವುದು ಮತ್ತು ವಾಹನವನ್ನು ಟೋ ಮಾಡುವ ಅಧಿಕಾರವನ್ನು ಸ್ಥಳೀಯ ಪೊಲೀಸರಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
