HomeLive Newsಪ್ರವಾಸಿಗರೇ ಗಮನಿಸಿ: ಯುನೆಸ್ಕೋ ವಿಶ್ವ ಪರಂಪರೆ ತಾಣವಾದ ಬೇಲೂರು ಚನ್ನಕೇಶವ ದೇವಾಲಯದ ಮುಂಭಾಗ ವಾಹನಗಳ ನಿಲುಗಡೆ...

ಪ್ರವಾಸಿಗರೇ ಗಮನಿಸಿ: ಯುನೆಸ್ಕೋ ವಿಶ್ವ ಪರಂಪರೆ ತಾಣವಾದ ಬೇಲೂರು ಚನ್ನಕೇಶವ ದೇವಾಲಯದ ಮುಂಭಾಗ ವಾಹನಗಳ ನಿಲುಗಡೆ ನಿಷೇಧ

ಹಾಸನ: ಯುನೆಸ್ಕೋ ವಿಶ್ವ ಪರಂಪರೆ ತಾಣವಾದ ಬೇಲೂರಿನ ಶ್ರೀ ಚನ್ನಕೇಶವ ದೇವಾಲಯದ ಸೌಂದರ್ಯ, ಪ್ರವಾಸಿಗರ ಭದ್ರತೆ ಮತ್ತು ಸಂಸ್ಕೃತಿಕ ಶಿಸ್ತಿಗೆ ಧಕ್ಕೆಯಾಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕ/ಪ್ರವಾಸಿಗರ ಹಿತದೃಷ್ಟಿಯಿಂದ ಶ್ರೀ ಚನ್ನಕೇಶವ ದೇವಾಲಯದ ಮುಂಭಾಗ ಪ್ರವಾಸಿಗರ ಹಾಗೂ ಸಾರ್ವಜನಿಕರ ಎಲ್ಲಾ ರೀತಿಯ ವಾಹನಗಳ ನಿಲುಗಡೆಯನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ಲತಾ ಕುಮಾರಿ ಅವರು ನಿಷೇಧಿಸಿ ಆದೇಶಿಸಿರುತ್ತಾರೆ.

ಶ್ರೀ ಚನ್ನಕೇಶವ ದೇವಾಲಯಕ್ಕೆ ಭೇಟಿ ನೀಡುವ ಪ್ರವಾಸಿಗರು/ಭಕ್ತಾಧಿಗಳು ಹಾಗೂ ಸಾರ್ವಜನಿಕರ ವಾಹನಗಳನ್ನು ದೇವಾಲಯದ ಹಿಂಭಾಗ ನಿಗಧಿಪಡಿಸಿರುವ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಈ ಆದೇಶ ಉಲ್ಲಂಘಿಸಿದ ವಾಹನ ಮಾಲೀಕರಿಗೆ ರೂ.500 ಗಳ ದಂಡವನ್ನು ವಿಧಿಸಲಾಗುವುದು ಮತ್ತು ವಾಹನವನ್ನು ಟೋ ಮಾಡುವ ಅಧಿಕಾರವನ್ನು ಸ್ಥಳೀಯ ಪೊಲೀಸರಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular