HomeLatest NewsBREAKING : ಪ್ರವಾಸಿಗರೇ ಗಮನಿಸಿ : ಚಿಕ್ಕಮಗಳೂರಿನ ಪ್ರಸಿದ್ದ ತಾಣ 'ಎತ್ತಿನಭುಜ' ಚಾರಣಕ್ಕೆ ತಾತ್ಕಾಲಿಕ ನಿರ್ಬಂಧ.!

BREAKING : ಪ್ರವಾಸಿಗರೇ ಗಮನಿಸಿ : ಚಿಕ್ಕಮಗಳೂರಿನ ಪ್ರಸಿದ್ದ ತಾಣ ‘ಎತ್ತಿನಭುಜ’ ಚಾರಣಕ್ಕೆ ತಾತ್ಕಾಲಿಕ ನಿರ್ಬಂಧ.!


ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರಸಿದ್ದ ಪ್ರವಾಸಿ ತಾಣ ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕವಾಗಿ ನಿರ್ಬಂಧ ಹೇರಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಹಲವು ಕಡೆ ಧಾರಾಕಾರ ಮಳೆಯಾಗುತ್ತಿರುವುದರಿಂದ ಗುಡ್ಡ ಕುಸಿತ ಉಂಟಾಗುತ್ತಿದೆ., ಮುನ್ನೆಚ್ಚರಿಕೆ ಕ್ರಮವಾಗಿ ಮುಂದಿನ ಆದೇಶದವರೆಗೂ ತಾತ್ಕಾಲಿಕ ನಿರ್ಬಂಧ ಹೇರಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

ಮಳೆಗಾಲದ ಈ ಸಂದರ್ಭದಲ್ಲಿ ಭೂ ಕುಸಿತ ಉಂಟಾಗುವ ಸಾಧ್ಯತೆ ಇರುವುದರಿಂದ ಈ ಚಾರಣ ಪ್ರದೇಶದಲ್ಲಿ ಹೆಚ್ಚಿನ ಮಂಜು ಕವಿದ ವಾತಾವರಣವಿರುವುದರಿಂದ ಚಿಕ್ಕಮಗಳೂರು ವಿಭಾಗ ವ್ಯಾಪ್ತಿಯ ಮೂಡಿಗೆರೆ ವಲಯದ “ಎತ್ತಿನಭುಜ” ಚಾರಣಕ್ಕೆ ಬರುವ ಪ್ರವಾಸಿಗರು ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇರುತ್ತದೆ. ಪ್ರವಾಸಿಗರ ಸುರಕ್ಷತೆಯ ಹಿತದೃಷ್ಟಿಯಿಂದ ಜುಲೈ 1ರಿಂದ ಜುಲೈ 31ರವರೆಗೆ ತಾತ್ಕಾಲಿಕವಾಗಿ ಎತ್ತಿನಭುಜ ಚಾರಣವನ್ನು ಸ್ಥಗಿತಗೊಳಿಸಲಾಗಿದೆ ಎಂದು ಆದೇಶ ಹೊರಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ಕೆಲ ದಿನಗಳಿಂದ ಅತಿಯಾಗಿ ಮಳೆಯಾಗುತ್ತಿರುವುದರಿಂದ, ಅಲ್ಲಲ್ಲಿ ಗುಡ್ಡಕುಸಿತ ಸಂಭವಿಸುತ್ತಿರುವುದರಿಂದ, ಮರಗಳು ಧರೆಗುರುಳುತ್ತಿದೆ. ಪೋಟೋ ತೆಗೆಯುವ ಸಂದರ್ಭದಲ್ಲಿ ಅಪಾಯಗಳು ಸಂಭವಿಸುವ ಸಾಧ್ಯತೆಯಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಎತ್ತಿನಭುಜಕ್ಕೆ ಚಾರಣ ಹೋಗುವುದನ್ನು ತಡೆಹಿಡಿಯಲಾಗಿದೆ .

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular