HomeKarnatakaಬೆಂಗಳೂರಿನಲ್ಲಿ ಟೋಯಿಂಗ್ ಪದ್ಧತಿ ಮರು ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಬೆಂಗಳೂರಿನಲ್ಲಿ ಟೋಯಿಂಗ್ ಪದ್ಧತಿ ಮರು ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಬೆಂಗಳೂರು: ಸಂಚಾರದಟ್ಟಣೆ ಸಮಸ್ಯೆಯಿಂದ ಬೆಂಗಳೂರಿನ ಹೆಸರು ಹಾಳಾಗುತ್ತಿದ್ದು, ಸೂಕ್ತ ವಾಹನ ನಿಲುಗಡೆ ನೀತಿ ರೂಪಿಸಬೇಕಿದೆ. ನೋ ಪಾರ್ಕಿಂಗ್ ಫಲಕ ಇರುವ ರಸ್ತೆಗಳ ಬದಿ ಬೇಕಾಬಿಟ್ಟಿಯಾಗಿ ವಾಹನ ನಿಲ್ಲಿಸಿದರೆ ಟೋಯಿಂಗ್ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರು ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಶುಕ್ರವಾರ 5 ನಗರ ಪಾಲಿಕೆಗಳ 2026 -27ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಿದ್ಧತೆ ಕುರಿತು ನಗರ ಶಾಸಕರೊಂದಿಗೆ ಅವರು ಸಭೆ ನಡೆಸಿದ್ದಾರೆ. ಬೇಕಾಬಿಟ್ಟಿ ವಾಹನ ಪಾರ್ಕಿಂಗ್ ಗೆ ಟೋಯಿಂಗ್ ಜಾರಿ, ನೋ ಪಾರ್ಕಿಂಗ್ ಸ್ಥಳದಲ್ಲಿ ಟೋಯಿಂಗ್ ಪದ್ಧತಿ ಮರು ಜಾರಿಗೆ ಕ್ರಮ ಕೈಗೊಳ್ಳಲಾಗಿದೆ. 5 ಪಾಲಿಕೆಗೆ ತಲಾ ಎರಡು ಟೋಯಿಂಗ್ ವಾಹನ ನೀಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ಘೋಷಣೆ ಮಾಡಿದ್ದಾರೆ.

ಎಲ್ಲಾ ಐದು ನಗರ ಪಾಲಿಕೆಗಳಿಗೂ ತಲಾ ಎರಡು ಟೋಯಿಂಗ್ ವಾಹನ ನೀಡಲಾಗಿದ್ದು, ಪೊಲೀಸರ ಸಹಯೋಗದಲ್ಲಿ ಸಂಚಾರಕ್ಕೆ ಅಡ್ಡಿ ಉಂಟು ಮಾಡುವ ಮತ್ತು ವಾಹನ ನಿಲುಗಡೆ ನಿಷೇಧಿತ ರಸ್ತೆಗಳಲ್ಲಿ ನಿಲ್ಲಿಸುವ ವಾಹನಗಳನ್ನು ಟೋಯಿಂಗ್ ಮಾಡಲು ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೊಲೀಸರು ಜಪ್ತಿ ಮಾಡಿರುವ ಹಳೆ ವಾಹನಗಳು ರಸ್ತೆ ಬದಿ ನಿಲ್ಲಿಸಿರುವುದು ಕೂಡ ಸಮಸ್ಯೆಗೆ ಕಾರಣವಾಗಿದೆ ಎಂದು ಶಾಸಕರು ದೂರಿದಾಗ, ಪೊಲೀಸ್ ಠಾಣೆ ಮತ್ತು ರಸ್ತೆ ಬದಿ ತುಂಬಾ ಸಮಯ ಕಾಲ ನಿಲ್ಲಿಸುವ ವಾಹನಗಳನ್ನು ಬೇರೆಡೆ ಸ್ಥಳಾಂತರಿಸಲು ಸೂಚಿಸಲಾಗಿದೆ. ಇದಕ್ಕಾಗಿ 4 ಕಡೆ ಜಾಗ ಗುರುತಿಸಲಾಗಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular