HomeEntertainmentಟಾಕ್ಸಿಕ್ ಚಿತ್ರದ ಬಗ್ಗೆ ಸುಳ್ಳು ಪ್ರಚಾರಕ್ಕೆ ಕೋರ್ಟ್‌ ತಡೆ: ಮಹತ್ವದ ಆದೇಶ

ಟಾಕ್ಸಿಕ್ ಚಿತ್ರದ ಬಗ್ಗೆ ಸುಳ್ಳು ಪ್ರಚಾರಕ್ಕೆ ಕೋರ್ಟ್‌ ತಡೆ: ಮಹತ್ವದ ಆದೇಶ

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್‌’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿರುವ ಬೆನ್ನಲ್ಲೇ ನಿರ್ಮಾಣ ಸಂಸ್ಥೆಗೆ ಕೋರ್ಟ್‌ನಿಂದ ಮಹತ್ವದ ಆದೇಶವೊಂದು ಸಿಕ್ಕಿದೆ. ಚಿತ್ರದ ಕುರಿತು ಸುಳ್ಳು, ಮಾನಹಾನಿಕರ ಅಥವಾ ಅವಹೇಳನಕಾರಿ ಸುದ್ದಿಗಳನ್ನು ಪ್ರಕಟಿಸುವುದಕ್ಕೆ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ.

‘ಕೆವಿಎನ್‌ ಪ್ರೊಡಕ್ಷನ್ಸ್‌ ಎಲ್‌ಎಲ್‌ಪಿ’ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನಗರದ 36ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ಈ ಆದೇಶ ನೀಡಿದೆ.

ಸೆ. 28ರವರೆಗೆ ಅಪಪ್ರಚಾರಕ್ಕೆ ತಡೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೋರ್ಟ್‌ ಆದೇಶದ ಪ್ರಕಾರ ‘ಟಾಕ್ಸಿಕ್‌’ ಚಿತ್ರದ ಕುರಿತು ಮಾಧ್ಯಮಗಳು, ಡಿಜಿಟಲ್‌ ವೇದಿಕೆಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು, ಮಾನಹಾನಿಕರ ಅಥವಾ ಅವಹೇಳನಕಾರಿ ಮಾಹಿತಿಯನ್ನು ಪ್ರಕಟಿಸುವುದು, ಪ್ರಸಾರ ಮಾಡುವುದು ಮತ್ತು ಹಂಚಿಕೊಳ್ಳುವುದಕ್ಕೆ ಸೆಪ್ಟೆಂಬರ್‌ 28ರವರೆಗೆ ನಿರ್ಬಂಧವಿದೆ.

ಆದರೆ ಈ ತಡೆಯಾಜ್ಞೆಯನ್ನು ಅರ್ಜಿದಾರರು ಕೋರ್ಟ್‌ ಸೂಚಿಸಿರುವ ಉದ್ದೇಶಕ್ಕೆ ಹೊರತಾಗಿ ಬಳಸುವಂತಿಲ್ಲ. ಷರತ್ತುಗಳನ್ನು ಉಲ್ಲಂಘಿಸಿದರೆ ತಡೆಯಾಜ್ಞೆ ಸ್ವಯಂಚಾಲಿತವಾಗಿ ರದ್ದಾಗಲಿದೆ ಎಂದು ನ್ಯಾಯಾಲಯ ತಿಳಿಸಿದೆ.

ಹೀಗಾಗಿ ಚಿತ್ರದ ಕುರಿತು ನಕಾರಾತ್ಮಕ ಅಥವಾ ಮಾನಹಾನಿಕರ ಪ್ರಚಾರ ನಡೆಯದಂತೆ ಕಾನೂನು ಕ್ರಮ ಕೈಗೊಳ್ಳಲು ನಿರ್ಮಾಣ ಸಂಸ್ಥೆಗೆ ಅವಕಾಶ ದೊರೆತಂತಾಗಿದೆ.

ಬಿಡುಗಡೆಗೂ ಮುನ್ನ ಧರ್ಮಸ್ಥಳಕ್ಕೆ ಯಶ್ ಭೇಟಿ

‘ಟಾಕ್ಸಿಕ್‌’ ಬಿಡುಗಡೆ ಹಿನ್ನೆಲೆಯಲ್ಲಿ ಯಶ್‌ ಸದ್ಯ ಪ್ರಚಾರ ಕಾರ್ಯಗಳಲ್ಲಿ ಬ್ಯುಸಿಯಾಗಿದ್ದಾರೆ. ಚೆನ್ನೈನಲ್ಲಿ ನಡೆದ ಪ್ರಿ-ರಿಲೀಸ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಅವರು ದಕ್ಷಿಣ ಕನ್ನಡದ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಯಶ್‌, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದರು. ಚಿತ್ರದ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆಯನ್ನೂ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಯಶ್‌, ತಮ್ಮ ಪ್ರತಿಯೊಂದು ಸಿನಿಮಾ ಬಿಡುಗಡೆಯ ಮುನ್ನವೂ ಧರ್ಮಸ್ಥಳಕ್ಕೆ ಭೇಟಿ ನೀಡುವುದು ಅಭ್ಯಾಸವಾಗಿದೆ ಎಂದು ಹೇಳಿದ್ದಾರೆ. ಈ ಬಾರಿ ಸಿನಿಮಾ ಕೆಲಸದ ಒತ್ತಡದಿಂದಾಗಿ ಕೊನೆಯ ಹಂತದಲ್ಲಿ ಭೇಟಿ ನೀಡುತ್ತಿರುವುದಾಗಿ ತಿಳಿಸಿದ್ದಾರೆ.

ಸುಮಾರು ನಾಲ್ಕು ವರ್ಷಗಳ ಬಳಿಕ ಯಶ್‌ ಅವರ ಸಿನಿಮಾ ತೆರೆಗೆ ಬರುತ್ತಿರುವುದರಿಂದ ‘ಟಾಕ್ಸಿಕ್‌’ ಬಗ್ಗೆ ಅಭಿಮಾನಿಗಳ ನಿರೀಕ್ಷೆ ಹೆಚ್ಚಿದೆ. ಸಿನಿಮಾ ಬಿಡುಗಡೆಯಾದ ಬಳಿಕ ಪ್ರೇಕ್ಷಕರ ಪ್ರತಿಕ್ರಿಯೆ ಹೇಗಿರಲಿದೆ ಎಂಬುದರ ಮೇಲೆ ಇದೀಗ ಎಲ್ಲರ ಗಮನ ನೆಟ್ಟಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular