HomeEntertainmentಟಾಕ್ಸಿಕ್ ಪ್ರೀ-ರಿಲೀಸ್ ಈವೆಂಟ್ ವೇಳೆ ಅನಾಹುತ: ಸೌಂಡ್‌ಬಾಕ್ಸ್ ಹಾಗೂ ಫ್ಲಡ್‌ಲೈಟ್ ಕಂಬ ಕುಸಿದು ಬಿದ್ದು ಹಲವರಿಗೆ...

ಟಾಕ್ಸಿಕ್ ಪ್ರೀ-ರಿಲೀಸ್ ಈವೆಂಟ್ ವೇಳೆ ಅನಾಹುತ: ಸೌಂಡ್‌ಬಾಕ್ಸ್ ಹಾಗೂ ಫ್ಲಡ್‌ಲೈಟ್ ಕಂಬ ಕುಸಿದು ಬಿದ್ದು ಹಲವರಿಗೆ ಗಂಭೀರ ಗಾಯ

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಅನಾಹುತ ಸಂಭವಿಸಿದೆ. ಸೌಂಡ್ ಬಾಕ್ಸ್ ಹಾಗೂ ಲೈಟಿಂಗ್ ಸೆಟಪ್ ಬಿದ್ದು ಹಲವು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೈದರಾಬಾದ್‌ನ ಮಲ್ಲಾರೆಡ್ಡಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಬೃಹತ್ ಕಾರ್ಯಕ್ರಮದಲ್ಲಿ ಸೌಂಡ್‌ಬಾಕ್ಸ್ ಮತ್ತು ಲೈಟಿಂಗ್ ಸೆಟಪ್‌ ಬಿದ್ದು ಕೆಲವು ವಿದ್ಯಾರ್ಥಿಗಳು ಹಾಗೂ ಅಭಿಮಾನಿಗಳು ಗಾಯಗೊಂಡಿದ್ದಾರೆ. ವೇದಿಕೆಯಲ್ಲಿ ಯಶ್ ಅವರು ಮಾತನಾಡುತ್ತಿದ್ದಾಗಲೇ ಈ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಗಸ್ಟ್ 26ರಂದು ‘ಟಾಕ್ಸಿಕ್’ ಸಿನಿಮಾ ವಿಶ್ವಾದ್ಯಂತ ರಿಲೀಸ್ ಆಗಲಿದೆ. ಈ ಹಿನ್ನೆಲೆಯಲ್ಲಿ ಹೈದರಾಬಾದ್ ನಲ್ಲಿ ಪ್ರೀ-ರಿಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳನ್ನು ಉದ್ದೇಶಿಸಿ ಯಶ್ ಅವರು ವೇದಿಕೆ ಮೇಲೆ ಮಾತನಾಡುತ್ತಿದ್ದ ಸಂದರ್ಭದಲ್ಲೇ ಈ ಅನಾಹುತ ಸಂಭವಿಸಿದೆ. ಸ್ಟೇಜ್ ಬಳಿ ನೆರೆದಿದ್ದ ಅಭಿಮಾನಿಗಳು, ವಿದ್ಯಾರ್ಥಿಗಳು ಸೌಂಡ್ ಬಾಕ್ಸ್, ಲೈಟಿಂಗ್ ಅಳವಡಿಸಿದ್ದ ಕಂಬ ಏರಲು ಯತ್ನಿಸಿದ್ದಾರೆ. ಈ ವೇಳೆ ಬೃಹತ್ ಸೌಂಡ್‌ಬಾಕ್ಸ್ ಹಾಗೂ ಫ್ಲಡ್‌ಲೈಟ್ ಕಂಬ ಕುಸಿದುಬಿದ್ದಿದೆ.

ಈ ವೇಳೆ ಕೆಲವು ಯುವಕ-ಯುವತಿಯರಿಗೆ ಗಾಯಗಳಾಗಿದೆ. ಈ ಘಟನೆಯಿಂದ ಓರ್ವ ವಿದ್ಯಾರ್ಥಿನಿ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ತಕ್ಷಣವೇ ಆಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಈ ಘಟನೆ ಸಂಭವಿಸುತ್ತಿದ್ದಂತೆಯೇ ವೇದಿಕೆ ಮೇಲಿದ್ದ ಯಶ್ ಅವರು ತಕ್ಷಣ ತಮ್ಮ ಮಾತು ನಿಲ್ಲಿಸಿ ಕಳವಳ ವ್ಯಕ್ತಪಡಿಸಿದರು. ಗಾಯಗೊಂಡ ವಿದ್ಯಾರ್ಥಿಗಳ ಕ್ಷೇಮ ವಿಚಾರಿಸಿದರು. ಪ್ರೇಕ್ಷಕರು ಶಾಂತವಾಗಿ ಕುಳಿತುಕೊಳ್ಳುವಂತೆ ಮತ್ತು ಜಾಗರೂಕರಾಗಿರುವಂತೆ ಮನವಿ ಮಾಡಿದರು. ಆಯೋಜಕರಿಂದ ಘಟನೆಯ ವಿವರ ಪಡೆದುಕೊಂಡು ಸುರಕ್ಷತೆಗೆ ಆದ್ಯತೆ ನೀಡುವಂತೆ ಸೂಚಿಸಿದರು ಎನ್ನಲಾಗಿದೆ.

ವೇದಿಕೆಯ ಹತ್ತಿರಕ್ಕೆ ಬರಲು ವಿದ್ಯಾರ್ಥಿಗಳು ಸೌಂಡ್‌ಬಾಕ್ಸ್ ಹಾಗೂ ಇತರ ಉಪಕರಣಗಳನ್ನು ಕಟ್ಟಿಹಾಕಿದ್ದ ಕಂಬಗಳನ್ನು ಹತ್ತಲು ಯತ್ನಿಸಿದ್ದೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ. ಘಟನೆಗೂ ಮುನ್ನವೇ ತಳ್ಳಾಟ ನಿಯಂತ್ರಿಸಲು ಜನರನ್ನು ಪೊಲೀಸರು ಹಿಂದೆ ಸರಿಯುವಂತೆ ಎಚ್ಚರಿಸಿದ್ದರು. ಆದರೆ ಮಲ್ಲಾರೆಡ್ಡಿ ಯೂನಿವರ್ಸಿಟಿಯಲ್ಲಿ ಅತಿಯಾದ ಜನಸ್ತೋಮ ಸೇರಿದ್ದರಿಂದ ಜನಸಂದಣಿ ನಿಯಂತ್ರಣ ಕಷ್ಟಕರವಾಗಿತ್ತು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular