‘ಟಾಕ್ಸಿಕ್’ ಚಿತ್ರದ ಶೂಟಿಂಗ್’ಗೆ ಮರಗಳ ಮಾರಣಹೋಮ : ಪರಿಶೀಲನೆಗೆ ‘BBMP’ ಅರಣ್ಯ ವಿಭಾಗದಿಂದ ಕಮಿಟಿ ರಚನೆ.!

ಬೆಂಗಳೂರು : ‘ಟಾಕ್ಸಿಕ್’ ಚಿತ್ರದ ಶೂಟಿಂಗ್ ಗಾಗಿ ಮರಗಳ ದಹನ ಆರೋಪಕ್ಕೆ ಸಂಬಂಧಿಸಿದಂತೆ ಪರಿಶೀಲನೆಗೆ ಬಿಬಿಎಂಪಿ ಅರಣ್ಯ ವಿಭಾಗದಿಂದ ಕಮಿಟಿ ರಚನೆ ಮಾಡಲಾಗಿದೆ.

ಬಿಬಿಎಂಪಿ ಅರಣ್ಯ ಉಪ ವಿಭಾಗಾಧಿಕಾರಿ ನೇತೃತ್ವದಲ್ಲಿ ಕಮಿಟಿ ರಚಿಸಲಾಗಿದ್ದು, ಈ ಕಮಿಟಿ ಈ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಲ್ಲಿಸಲಿದೆ.

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಗಾಗಿ ನೂರಾರು ಮರಗಳ ಮಾರಣಹೋಮ ನಡೆಸಿರುವ ಆರೋಪ ಕೇಳಿಬಂದಿದೆಬೆಂಗಳೂರಿನ ಹೆಚ್.ಎಂ.ಟಿ ಅರಣ್ಯ ಪ್ರದೇಶದಲ್ಲಿ ‘ಟಾಕ್ಸಿಕ್’ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದು, ಭಾರಿ ಸೆಟ್ ನಿರ್ಮಾಣ ಮಾಡಲಾಗಿದೆ. ಶೂಟಿಂಗ್ ಸೆಟ್ ನಿರ್ಮಾಣಕ್ಕಾಗಿ ಅರಣ್ಯ ಪ್ರದೇಶದಲ್ಲಿರುವ ನೂರಾರು ಮರಗಳನ್ನು ಕಡಿಯಲಾಗಿರುವುದು ಸ್ಯಾಟಲೈಟ್ ಇಮೇಜ್ ಪರಿಶೀಲನೆ ವೇಳೆ ಪತ್ತೆಯಾಗಿದೆ.ಈ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಮರ ಕಡಿದವರ ವಿರುದ್ಧ ಅರಣ್ಯ ಅಪರಾಧ ಅಡಿ ಕೇಸ್ ದಾಖಲಿಸಿ, ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದಾರೆ.

https://twitter.com/eshwar_khandre/status/1851204446631387528

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read