ಸ್ಯಾಂಡಲ್‌ವುಡ್‌ನಿಂದ ಹಾಲಿವುಡ್‌ವರೆಗೂ ನಿರೀಕ್ಷೆ ಮೂಡಿಸಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಲಿದೆ. ಟ್ರೈಲರ್ ಬಿಡುಗಡೆ ಸಮಯವನ್ನು ಚಿತ್ರತಂಡ ಇದೀಗ ಅಧಿಕೃತವಾಗಿ ಘೋಷಿಸಿದೆ.
ಚಿತ್ರತಂಡ ಹಂಚಿಕೊಂಡಿರುವ ಹೊಸ ಪೋಸ್ಟರ್‌ನಲ್ಲಿ ಭಾರೀ ಸ್ಫೋಟ ಮತ್ತು ಬೆಂಕಿಯ ನಡುವೆ ಯಶ್ ಮಾಸ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಪೋಸ್ಟರ್‌ನಲ್ಲಿ ‘TRAILER 7:01 PM’ ಎಂದು ಉಲ್ಲೇಖಿಸಲಾಗಿದ್ದು, ಇಂದು ಸಂಜೆ 7:01ಕ್ಕೆ ಟ್ರೈಲರ್ ಬಿಡುಗಡೆಯಾಗಲಿದೆ.
https://www.instagram.com/p/Dbw2cLJPF1k/?utm_source=ig_embed&ig_rid=ACJMTEl_F9OMy9NL5eI4vw_
ಗೀತು ಮೋಹನ್‌ದಾಸ್ ನಿರ್ದೇಶನದ ‘ಟಾಕ್ಸಿಕ್’ ಚಿತ್ರದಲ್ಲಿ ಯಶ್ ರಾಯ್ ಮತ್ತು ಟಿಕೆಟ್ ಎಂಬ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಿಯಾರಾ ಅಡ್ವಾಣಿ ನಾಡಿಯಾ ಪಾತ್ರದಲ್ಲಿ ನಟಿಸಿದ್ದು, ನಯನತಾರಾ ಗಂಗಾ, ಹುಮಾ ಖುರೇಷಿ ಎಲಿಜಬೆತ್, ತಾರಾ ಸುತಾರಿಯಾ ರೆಬೆಕ್ಕಾ ಹಾಗೂ ರುಕ್ಮಿಣಿ ವಸಂತ್ ಮೆಲಿಸ್ಸಾ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಚಿತ್ರೀಕರಣಗೊಂಡಿರುವ ಈ ಸಿನಿಮಾ ಬಳಿಕ ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಡಬ್ ಆಗಿ ಬಿಡುಗಡೆಯಾಗಲಿದೆ.
ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ವೆಂಕಟ್ ಕೆ. ನಾರಾಯಣ ಹಾಗೂ ಯಶ್ ಜಂಟಿಯಾಗಿ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ ನೀಡಿದ್ದು, ಉಜ್ವಲ್ ಕುಲಕರ್ಣಿ ಸಂಕಲನದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಟ್ರೈಲರ್‌ನಲ್ಲಿ ಯಶ್ ಅವರ ಲುಕ್, ಆ್ಯಕ್ಷನ್ ಹಾಗೂ ಚಿತ್ರದ ಕಥೆಯ ಕುರಿತು ಯಾವ ರೀತಿಯ ಸುಳಿವು ಸಿಗಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿದೆ. ಇಂದು ಸಂಜೆ ಟ್ರೈಲರ್ ಬಿಡುಗಡೆಯಾದ ಬಳಿಕ ಚಿತ್ರದ ಬಗ್ಗೆ ಮತ್ತಷ್ಟು ಮಾಹಿತಿ ಹೊರಬೀಳುವ ನಿರೀಕ್ಷೆಯಿದೆ.

