HomeEntertainmentಅಧಿಕೃತ ಕಲೆಕ್ಷನ್ ಘೋಷಿಸಿ ಟಾಕ್ಸಿಕ್ ಬುಕಿಂಗ್ ಫೇಕ್ ಎಂದವರ ಬಾಯಿ ಮುಚ್ಚಿಸಿದ ಯಶ್: ಚಿತ್ರ ಅಡ್ವಾನ್ಸ್...

ಅಧಿಕೃತ ಕಲೆಕ್ಷನ್ ಘೋಷಿಸಿ ಟಾಕ್ಸಿಕ್ ಬುಕಿಂಗ್ ಫೇಕ್ ಎಂದವರ ಬಾಯಿ ಮುಚ್ಚಿಸಿದ ಯಶ್: ಚಿತ್ರ ಅಡ್ವಾನ್ಸ್ ಬುಕಿಂಗ್‌ನಲ್ಲಿ ಗಳಿಸಿದ್ದೆಷ್ಟು?

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಬಿಡುಗಡೆಗೂ ಮುನ್ನವೇ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. ಆಗಸ್ಟ್ 26ರಂದು ವಿಶ್ವಾದ್ಯಂತ ತೆರೆಗೆ ಬರಲಿರುವ ಚಿತ್ರದ ಅಡ್ವಾನ್ಸ್ ಟಿಕೆಟ್ ಬುಕಿಂಗ್‌ಗೆ ಅಭಿಮಾನಿಗಳಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಕರ್ನಾಟಕದಲ್ಲಿ ‘ಟಾಕ್ಸಿಕ್’ ಚಿತ್ರದ ಮುಂಗಡ ಟಿಕೆಟ್ ಮಾರಾಟ 13 ಕೋಟಿ ರೂ ಗಡಿ ದಾಟಿದೆ ಎಂದು ಟಾಕ್ಸಿಕ್ ಸಹ ನಿರ್ಮಾಣ ಸಂಸ್ಥೆ ಮಾನ್‌ಸ್ಟರ್ ಮೈಂಡ್ಸ್ ಕ್ರಿಯೇಷನ್ಸ್ ಅಧಿಕೃತವಾಗಿ ಪೋಸ್ಟ್ ಹಂಚಿಕೊಂಡಿದೆ. ಈ ಮೂಲಕ ಮುಂಗಡ ಬುಕಿಂಗ್ ಫೇಕ್, ಎಲ್ಲ ಕಾರ್ಪೋರೇಟ್ ಬುಕಿಂಗ್ ಎಂದು ಬೊಬ್ಬೆ ಹೊಡೆಯುತ್ತಿದ್ದವರ ಬಾಯಿ ಮುಚ್ಚಿಸಿದೆ.

ಇದರಿಂದ ರಾಜ್ಯದ ಮಾರುಕಟ್ಟೆಯಲ್ಲಿ ಯಶ್ ಅವರ ಕ್ರೇಜ್ ಮತ್ತೊಮ್ಮೆ ಸಾಬೀತಾಗಿದೆ. ಬೆಂಗಳೂರಿನಲ್ಲಿ ಮಾತ್ರ ಪ್ರತಿ ಗಂಟೆಗೆ ಸಾವಿರಾರು ಟಿಕೆಟ್‌ಗಳು ಮಾರಾಟವಾಗುತ್ತಿದ್ದು, ಹಲವು ಪ್ರದರ್ಶನಗಳು ಈಗಾಗಲೇ ವೇಗವಾಗಿ ಭರ್ತಿಯಾಗುತ್ತಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿತ್ರದ ಅಡ್ವಾನ್ಸ್ ಬುಕಿಂಗ್‌ನಲ್ಲಿ ಕನ್ನಡ ಆವೃತ್ತಿಯೇ ಮುನ್ನಡೆ ಸಾಧಿಸುತ್ತಿದೆ. ದೇಶಾದ್ಯಂತವೂ ಚಿತ್ರದ ಬೇಡಿಕೆ ಹೆಚ್ಚಾಗಿದ್ದು, ಇನ್ನಷ್ಟು ನಗರಗಳಲ್ಲಿ ಬುಕಿಂಗ್ ಪೂರ್ಣ ಪ್ರಮಾಣದಲ್ಲಿ ಆರಂಭವಾದ ಬಳಿಕ ಮುಂಗಡ ಮಾರಾಟ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಿದೆ.

ಗೀತು ಮೋಹನ್‌ದಾಸ್ ನಿರ್ದೇಶನದ ಈ ಚಿತ್ರದಲ್ಲಿ ಯಶ್ ಜೊತೆಗೆ ನಯನತಾರಾ, ಕಿಯಾರಾ ಅಡ್ವಾಣಿ ಸೇರಿದಂತೆ ಪ್ರಮುಖ ತಾರೆಯರು ನಟಿಸಿದ್ದಾರೆ. ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.

ಬಿಡುಗಡೆಗೆ ಇನ್ನೂ ಕೆಲವೇ ದಿನಗಳು ಬಾಕಿಯಿರುವ ಹಿನ್ನೆಲೆಯಲ್ಲಿ ‘ಟಾಕ್ಸಿಕ್’ ಮೊದಲ ದಿನವೇ ಭರ್ಜರಿ ಓಪನಿಂಗ್ ಪಡೆಯುವ ನಿರೀಕ್ಷೆ ಹೆಚ್ಚಾಗಿದೆ.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular